Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಶಾಸಕ...

ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಶಾಸಕ ರೇಣುಕಾಚಾರ್ಯ ವಿರುದ್ಧ ತನಿಖೆ ನಡೆಸಿ: ಎಂ.ಲಕ್ಷ್ಮಣ್ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ24 March 2022 9:32 PM IST
share
ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಶಾಸಕ ರೇಣುಕಾಚಾರ್ಯ ವಿರುದ್ಧ ತನಿಖೆ ನಡೆಸಿ: ಎಂ.ಲಕ್ಷ್ಮಣ್ ಆಗ್ರಹ

ಮೈಸೂರು,ಮಾ.14: ಶಾಸಕ ಎಂ.ಪಿ.ರೇಣುಕಾಚಾರ್ಯ ಮಕ್ಕಳಿಗೆ ನಕಲಿ ಜಾತಿ ಪ್ರಮಾಣ ಪತ್ರ ಕೊಡಿಸಿ ಸರ್ಕಾರದ ಸವಲತ್ತನ್ನು ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತು ತನಿಖೆ ನಡೆಸುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಆಗ್ರಹಿಸಿದ್ದಾರೆ.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಜಗತ್ಪ್ರಸಿದ್ಧ. ಮಣ್ಣಿನ ಮೇಲೆ ದೋಣಿ ನಡೆಸಿರುವ ವ್ಯಕ್ತಿ. ಈ ವ್ಯಕ್ತಿಗೆ ಇಬ್ಬರು ಮಕ್ಕಳಿದ್ದಾರೆ. ಪುತ್ರ ಅಮೆರಿಕಾದಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದಾರೆ. ಪುತ್ರಿ ಬೆಂಗಳೂರಿನಲ್ಲಿ ಪಿಯುಸಿ ವ್ಯಾಸಾಂಗ ಮಾಡುತ್ತಿದ್ದಾರೆ. ರೇಣುಕಾಚಾರ್ಯ ಇಬ್ಬರಿಗೂ ಎಸ್ಸಿ ಸರ್ಟಿಫಿಕೇಟ್ ಕೊಡಿಸಿದ್ದಾರೆ. ಸರ್ಟಿಫಿಕೇಟ್ ಕೊಡಿಸಿ ಸರ್ಕಾರದ ಸವಲತ್ತನ್ನು ಪಡೆದಿದ್ದಾರೆ. ಫೇಕ್ ಸರ್ಟಿಫಿಕೇಟ್ ಪಡೆದಿರುವ ಈ ಎಲ್ಲಾ ದಾಖಲೆಗಳನ್ನು ಸಿಎಂ ಗೆ ಕಳುಹಿಸಿದ್ದೇನೆ ಎಂದರು.

ಎಸ್ಸಿ, ಎಸ್ಟಿಯ ಸೌಲಭ್ಯಗಳನ್ನ ಬಿಜೆಪಿ ಮುಖಂಡರು ಕಸಿಯುತ್ತಿದ್ದಾರೆ. ಶಾಲಾ ದಾಖಲಾತಿಯಲ್ಲಿ ಲಿಂಗಾಯತ ಎಂದು ನಮೂದಾಗಿದೆ. ರೇಣುಕಾಚಾರ್ಯ ಅಣ್ಣ ಎಂ.ಪಿ.ದಾರಕೇಶ್ವರಯ್ಯ ಕೂಡಾ ಎಸ್ಸಿ ಸರ್ಟಿಫಿಕೇಟ್ ಪಡೆದಿದ್ದಾರೆ. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕು. ಇದೇ ಕೆಲಸ ಕಾಂಗ್ರೆಸ್ ನವರು ಮಾಡಿದ್ರೆ ಸುಮ್ನಿರ್ತಿದ್ರಾ.? ಇದು ಕ್ರಿಮಿನಲ್ ಅಫೆನ್ಸ್. ಈ ವಿಚಾರದಲ್ಲಿ ಬಿಜೆಪಿ ಸರ್ಕಾರ ಮೌನವಹಿಸಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ, ಸ್ಪೀಕರ್ ಹಾಗೂ ಎಸ್ಸಿ, ಎಸ್ಟಿ ಆಯೋಗಕ್ಕೆ ದೂರು ನೀಡುತ್ತೇವೆ. ಎಂ.ಪಿ.ರೇಣುಕಾಚಾರ್ಯ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದರ ಬಗ್ಗೆ ತನಿಖೆ ಆಗಬೇಕು. ಮಾತಿಗೆ ತಕ್ಕಂತೆ ರೇಣುಕಾಚಾರ್ಯ ರಾಜಿನಾಮೆ ನೀಡಬೇಕು. ಬಿಜೆಪಿಯ ದಲಿತ ನಾಯಕರು ಏನು ಮಾಡುತ್ತಿದ್ದೀರಿ? ನಿಮ್ಮ ಸಮುದಾಯಕ್ಕೆ ಅನ್ಯಾಯ ಆಗುತ್ತಿದ್ದರೂ ಕಣ್ಮುಚ್ಚಿ ಕುಳಿತಿದ್ದೀರಿ ಎಂದು ಎಂ.ಲಕ್ಷ್ಮಣ್ ಕಿಡಿಕಾರಿದರು.

ಜಾತ್ರೆಗಳಲ್ಲಿ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಎಂ. ಲಕ್ಷ್ಮಣ್, ಕೆಲ ಹಿಂದೂ ಸಂಘಟನೆಯವರು ಕಾನೂನಿನ ವಿರುದ್ಧವಾಗಿ ಕೆಲಸ ಮಾಡುತಿದ್ದಾರೆ. ಸರ್ಕಾರದ ಕುಮ್ಮಕ್ಕಿನಿಂದಲೇ ಮುಸ್ಲಿಂ ವರ್ತಕರಿಗೆ ಬಹಿಷ್ಕಾರ ಹಾಕಲಾಗಿದೆ. ಇದು ರಾಜ್ಯದಿಂದ ಮುಸ್ಲಿಂ ಸಮುದಾಯವನ್ನೇ ಬಹಿಷ್ಕರಿಸುವ ಹುನ್ನಾರ. ಅಂತರಾಷ್ಟ್ರೀಯ ಮಟ್ಟದಲ್ಲಿ ರಾಜ್ಯ, ದೇಶದ ಮರ್ಯಾದೆ ಹೋಗುತ್ತಿದೆ. ದುಬೈ, ಕುವೈತ್, ಅಬುಧಾಬಿ ಸೇರಿ ಅನೇಕ ರಾಷ್ಟ್ರಗಳಲ್ಲೂ ಹಿಂದುಗಳು ಕೆಲಸ ಮಾಡುತ್ತಿದ್ದಾರೆ. ಒಂದು ವೇಳೆ ಅಲ್ಲಿ ಅವರನ್ನ ಬಹಿಷ್ಕಾರ ಮಾಡಿದ್ರೆ ಅವರಿಗೆ ನೀವು ಕೆಲಸ ಕೊಡ್ತಿರಾ.? ಎಂದು ಸರ್ಕಾರಕ್ಕೆ ಚಾಟಿ ಬೀಸಿದರು.

ಕಳೆದ 50 ವರ್ಷದಲ್ಲೇ ಹೆಚ್ಚಿನ ನಿರುದ್ಯೋಗ ಸಮಸ್ಯೆ ಇದೆ. ಇದನ್ನ ಡೈವರ್ಟ್ ಮಾಡಲು ಬೇರೆ ಬೇರೆ ವಿಷಯಗಳನ್ನು ಮಧ್ಯೆ ತರ್ತಿದ್ದಾರೆ. ಮಂಗಳೂರು ಕಮಿಷನರ್ ಏನ್ಮಾಡ್ತಿದ್ದೀರಿ. ನೀವೆನು ಬಿಜೆಪಿ ಏಜೆಂಟಾ.? ಈ ಬಗ್ಗೆ ಯಾಕೆ ಇನ್ನೂ ಕ್ರಮ ಆಗಿಲ್ಲ. ಹೋಂ ಮಿನಿಸ್ಟರ್ ಅರಗ ಜ್ಞಾನೇಂದ್ರ ಏನ್ಮಾಡ್ತಿದ್ದೀರಿ ಎಂದು ಎಂ.ಲಕ್ಷ್ಮಣ್ ಪ್ರಶ್ನಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X