ಬೆಂಗಳೂರು: ಶಾಲೆಯಲ್ಲಿ ಅವಮಾನ ಆರೋಪ; ವಿದ್ಯಾರ್ಥಿ ಆತ್ಮಹತ್ಯೆ

ಬೆಂಗಳೂರು, ಮಾ.24: ಶಾಲೆಯಲ್ಲಿ ಅವಮಾನ ಆಗಿದ್ದಕ್ಕೆ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಧೀರಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಪೊಲೀಸರು ಗುರುತಿಸಿದ್ದಾರೆ.
ರಾಜರಾಜೇಶ್ವರಿ ನಗರ ಸಮೀಪದ ಸ್ವರ್ಗರಾಣಿ ಶಾಲೆ ಮತ್ತು ಪಿಯು ಕಾಲೇಜಿನಲ್ಲಿ ಓದುತ್ತಿದ್ದ ಧೀರಜ್, ಬುಧವಾರ ಪರೀಕ್ಷೆ ಸಂದರ್ಭದಲ್ಲಿ ಇತರರನ್ನು ನೋಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಶಿಕ್ಷಕರು ಆತನಿಗೆ ಬೈದು ಪೋಷಕರಿಗೆ ಮಾಹಿತಿ ನೀಡಿದ್ದರಂತೆ. ಬಳಿಕ ಕಾಲೇಜು ಪ್ರಾಂಶುಪಾಲರು ಕ್ಷಮಾಪಣಾ ಪತ್ರ ಬರೆಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.
ಇದರಿಂದ ಮನನೊಂದ ಧೀರಜ್ ಮನೆಗೆ ಬಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಈ ಘಟನೆ ಕುರಿತು ಸದ್ಯ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Next Story





