Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪರಿಷ್ಕೃತ ಗೌರವಧನ ಪಾವತಿಸುವ...

ಪರಿಷ್ಕೃತ ಗೌರವಧನ ಪಾವತಿಸುವ ಪ್ರಸ್ತಾವಕ್ಕೆ ಹಿನ್ನಡೆ: ಗ್ರಂಥಾಲಯ ಮೇಲ್ವಿಚಾರಕರ ಬದುಕು ಬೀದಿಗೆ

ಜಿ.ಮಹಾಂತೇಶ್ಜಿ.ಮಹಾಂತೇಶ್25 March 2022 9:24 AM IST
share
ಪರಿಷ್ಕೃತ ಗೌರವಧನ ಪಾವತಿಸುವ ಪ್ರಸ್ತಾವಕ್ಕೆ ಹಿನ್ನಡೆ: ಗ್ರಂಥಾಲಯ ಮೇಲ್ವಿಚಾರಕರ ಬದುಕು ಬೀದಿಗೆ

ಬೆಂಗಳೂರು: ಮುಖ್ಯಮಂತ್ರಿ ಸೇರಿದಂತೆ ಶಾಸಕರ ವೇತನ ಪರಿಷ್ಕರಿಸಿಕೊಳ್ಳಲು ಯಾವುದೇ ತಕರಾರು, ಆಕ್ಷೇಪಣೆ ವ್ಯಕ್ತಪಡಿಸದೇ ಅನುಮತಿ ನೀಡುವ ಆರ್ಥಿಕ ಇಲಾಖೆಯು ಸಾರ್ವಜನಿಕ ಗ್ರಂಥಾಲಯಗಳ ವ್ಯಾಪ್ತಿಯಲ್ಲಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಪರಿಷ್ಕೃತ ಗೌರವ ಧನ ಪಾವತಿಸುವ ಪ್ರಸ್ತಾವವನ್ನೇ ತಳ್ಳಿ ಹಾಕಿರುವುದು ಇದೀಗ ಬಹಿರಂಗವಾಗಿದೆ.

ಗ್ರಂಥಾಲಯ ಮೇಲ್ವಿಚಾರಕರಿಗೆ ಪರಿಷ್ಕೃತ ಗೌರವ ಧನ ಪಾವತಿಸುವ ಸಂಬಂಧ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಇದನ್ನು ಪರಿಶೀಲಿಸಿರುವ ಇಲಾಖೆಯು ಆರ್ಥಿಕ ನಿರ್ಬಂಧಗಳು ಜಾರಿಯಲ್ಲಿರುವ ಕಾರಣ ಗೌರವ ಧನ ಪಾವತಿಸುವ ಪ್ರಸ್ತಾವ ಪರಿಗಣಿಸಲಾಗದು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ. ಇದರ ಪ್ರತಿ ‘the-file.in'ಗೆ ಲಭ್ಯವಾಗಿದೆ.

ಆಡಳಿತ ಇಲಾಖೆಯ ಪ್ರಸ್ತಾವವನ್ನ್ನು ಪರಿಶೀಲಿಸಿದೆ. ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಂಥಾಲಯ ಮೇಲ್ವಿ ಚಾರಕರಿಗೆ ಪರಿಷ್ಕೃತ ಗೌರವಧನ ಪಾವತಿಸಲು ಉದ್ದೇಶಿ ಸಿರುವ ಪ್ರಸ್ತಾವವನ್ನು ಪ್ರಸಕ್ತ ಇರುವ ಆರ್ಥಿಕ ನಿರ್ಬಂಧಗಳ ಹಿನ್ನೆಲೆಯಲ್ಲಿ ಪರಿಗಣಿಸಲು ಸಾಧ್ಯವಿರು ವುದಿಲ್ಲ ಎಂದು 2022ರ ಜನವರಿ 24ರಂದು ಆರ್ಥಿಕ ಇಲಾಖೆಯು ಶಿಕ್ಷಣ ಇಲಾಖೆಗೆ ತಿಳಿಸಿದೆ.

ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿ ಅಂದಾಜು 1,000 ಗ್ರಂಥಾಲಯಗಳಲ್ಲಿ ಕನಿಷ್ಠ 250 ಮಂದಿ ಗ್ರಂಥಾಲಯ ಮೇಲ್ವಿಚಾರಕರಾಗಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ಹಾಗೆಯೇ ಗೌರವಧನವು ಹಲವು ವರ್ಷಗಳಿಂದ ಪರಿಷ್ಕರಣೆಯಾಗಿರಲಿಲ್ಲ. ಹೀಗಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು ಗೌರವ ಧನವನ್ನು ಪರಿಷ್ಕರಿಸಿ ಅಂದಾಜು 3 ಕೋಟಿ ರೂ. ಒದಗಿಸಬೇಕು ಎಂಬ ಪ್ರಸ್ತಾವವನ್ನು ಆರ್ಥಿಕ ಇಲಾಖೆಗೆ ಸಲ್ಲಿಸಿತ್ತು ಎಂದು ತಿಳಿದು ಬಂದಿದೆ.

 ಆದರೆ ಈ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಆರ್ಥಿಕ ನಿರ್ಬಂಧಗಳ ಹಿನ್ನೆಲೆಯಲ್ಲಿ ತಳ್ಳಿ ಹಾಕುವ ಮೂಲಕ ಹಲವು ವರ್ಷಗಳಿಂದ ಕಡಿಮೆ ಗೌರವಧನಕ್ಕೆ ಕೆಲಸ ಮಾಡುತ್ತಿರುವ ಮೇಲ್ವಿಚಾರಕರ ಹೊಟ್ಟೆ ಮೇಲೆ ಹೊಡೆದಂತಾಗಿದೆ. ಸಚಿವ ಬಿ.ಸಿ. ನಾಗೇಶ್ ಆರ್ಥಿಕ ಇಲಾಖೆ ಜವಾಬ್ದಾರಿ ಹೊತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ಈ ಸಂಬಂಧ ಚರ್ಚೆಯನ್ನೂ ನಡೆಸಿಲ್ಲ ಎಂದು ಗೊತ್ತಾಗಿದೆ.

 ಇನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ಆರು ಸಾವಿರ ಗ್ರಾಮ ಪಂಚಾಯತ್‌ಗಳಲ್ಲಿ ಗ್ರಂಥಾಲಯ ಮೇಲ್ವಿಚಾರಕರು ಕೆಲಸ ಮಾಡುತ್ತಿದ್ದಾರೆ. ಇವರು ಸಹ ಕನಿಷ್ಠ ವೇತನಕ್ಕಾಗಿ 32 ವರ್ಷಗಳಿಂದ ಬಕಪಕ್ಷಿಯಂತೆ ಕಾಯುತ್ತಿದ್ದಾರೆ.

 1988ರಲ್ಲಿ ಗ್ರಂಥಾಲಯ ಆರಂಭವಾದಾಗ ಇದ್ದ ಗೌರವಧನ 300. ಮೇಲ್ವಿಚಾರಕರು 10 ವರ್ಷ ಅದೇ ಗೌರವಧನದಲ್ಲಿ ಜೀವನ ಸಾಗಿಸಿದ್ದರು. ಗೌರವ ಧನವು ಅತ್ಯಲ್ಪಮಟ್ಟದಲ್ಲಿ ಹೆಚ್ಚಳವಾಗಿ ಇದೀಗ ರೂ. 7 ಸಾವಿರಕ್ಕೆ ಬಂದು ನಿಂತಿದೆ.

ಕನಿಷ್ಠ ಸಂಬಳ 13 ಸಾವಿರ ರೂ. ನೀಡಿ ಎಂಬ ಕಾರ್ಮಿಕ ಇಲಾಖೆಯ ಸುತ್ತೋಲೆಯನ್ನು ಶಿಕ್ಷಣ ಇಲಾಖೆ ಹಿಂದೆಗೆದುಕೊಂಡಿದ್ದು, ಮೇಲ್ವಿಚಾರಕರ ಕೆಲಸದ ಅವಧಿಯನ್ನು ಇದೀಗ ನಾಲ್ಕು ಗಂಟೆಗೆ ಇಳಿಸಿ, 7 ಸಾವಿರ ಗೌರವಧನವನ್ನೇ ಮುಂದುವರಿಸುವ ಜಾಣತನ ತೋರಿಸಿದೆ. ‘ನಾಲ್ಕು ಗಂಟೆಯಾದರೂ ನಾವು ದಿನವಿಡೀ ಸಮಯ ವ್ಯರ್ಥ ಮಾಡಬೇಕಾಗಿದೆ. ನಮ್ಮ ಜೀವನಕ್ಕೆ ಭದ್ರತೆ ಇಲ್ಲವಾಗಿದೆ’ ಎನ್ನುತ್ತಾರೆ ಮೇಲ್ವಿಚಾರಕರೊಬ್ಬರು.

ಗೌರವ ಧನ ಹೆಚ್ಚಳ ಮಾಡದ ಕಾರಣ ಗ್ರಂಥಾಲಯ ಮೇಲ್ವಿಚಾರಕರಾಗಿದ್ದ ಆರ್.ರೇವಣ್ಣ ಎಂಬುವರು ವಿಧಾನಸೌಧದ ಮೂರನೇ ಮಹಡಿಯಲ್ಲಿ 2019ರ ಜೂನ್ 24ರಂದು ಆತ್ಮಹತ್ಯೆಗೆ ಯತ್ನಿಸಿದ್ದನ್ನು ಸ್ಮರಿಸಬಹುದು.

ಗ್ರಾಪಂ ಗ್ರಂಥಾಲಯಗಳಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಗ್ರಂಥಾಲಯ ಮೇಲ್ವಿಚಾರಕರಿಗೆ ಸಮಯ ಬದಲಾವಣೆ, ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಕಲ್ಪಿಸಿ, ಗೌರವಧನ 7,000 ದಿಂದ 12,000 ರೂ.ಗೆ ಹೆಚ್ಚಿಸಿ 2021ರ ಮೇ 26ರಂದು ಕರ್ನಾಟಕ ಸರಕಾರ ಆದೇಶ ಹೊರಡಿಸಿತ್ತು. ಆದರೆ ಸಾರ್ವಜನಿಕ ಗ್ರಂಥಾಲಯ ಇಲಾಖೆ ವ್ಯಾಪ್ತಿಯಲ್ಲಿರುವ ಗ್ರಂಥಾಲಯಗಳ ಮೇಲ್ವಿಚಾರಕರಿಗೆ ಪರಿಷ್ಕೃತ ಗೌರವ ಧನ ಪಾವತಿಸುವ ಸಂಬಂಧದ ಪ್ರಸ್ತಾವವನ್ನು ತಳ್ಳಿ ಹಾಕುವ ಮೂಲಕ ಅವರನ್ನು ಬೀದಿಗೆ ತಂದು ನಿಲ್ಲಿಸಿದಂತಾಗಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X