Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ: ರೈತರ...

ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ: ರೈತರ ಭೂ ಪರಿಹಾರ ಸರಳೀಕರಣ; ಸಚಿವ ಮುರುಗೇಶ್ ನಿರಾಣಿ

ವಾರ್ತಾಭಾರತಿವಾರ್ತಾಭಾರತಿ25 March 2022 6:20 PM IST
share
ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ: ರೈತರ ಭೂ ಪರಿಹಾರ ಸರಳೀಕರಣ; ಸಚಿವ ಮುರುಗೇಶ್ ನಿರಾಣಿ

ಬೆಂಗಳೂರು, ಮಾ. 25: ‘ಕರ್ನಾಟಕ ಪ್ರದೇಶ ಕೈಗಾರಿಕಾ ಅಭಿವೃದ್ಧಿ ಮಂಡಳಿ(ಕೆಐಎಡಿಬಿ) ಕಾಯ್ದೆಗೆ ತಿದ್ದುಪಡಿ ಮಾಡಿರುವುದರಿಂದ ಇನ್ನು ಮುಂದೆ ಕೈಗಾರಿಕಾ ಉದ್ದೇಶಕ್ಕಾಗಿ ಭೂಮಿ ನೀಡುವ ರೈತರಿಗೆ ಪರಿಹಾರ ನೀಡಲು ಯಾವುದೇ ಸಮಸ್ಯೆ ಎದುರಾಗುವುದಿಲ್ಲ' ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಎನ್.ಎ.ಹಾರಿಶ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ಹಿಂದೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಕಾಯ್ದೆಗಳು ಪ್ರತ್ಯೇಕವಾಗಿದ್ದವು. ಇತ್ತೀಚೆಗೆ ಹಾಲಿ ಇದ್ದ ಕೆಐಎಡಿಬಿ ಕಾಯ್ದೆಗೆ ಉಭಯ ಸದನಗಳಲ್ಲಿ ತಿದ್ದುಪಡಿ ಮಾಡಿದ್ದರಿಂದ ರೈತರಿಗೆ ತೊಂದರೆಯಾಗದಂತೆ ಪರಿಹಾರ ನೀಡಲಾಗುತ್ತದೆ' ಎಂದು ಹೇಳಿದರು.

‘ಹೊಸ ಭೂ ಸ್ವಾಧೀನ ಕಾಯ್ದೆ 2013ರ ಅನ್ವಯ ಭೂ ಪರಿಹಾರ ಒದಗಿಸುವ ಸಂಬಂಧ ಕೆಐಎಡಿಬಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ಇನ್ನು ಮುಂದೆ ನಾವು ಯಾವುದೇ ವಿಳಂಬವಾಗದಂತೆ ಪರಿಹಾರವನ್ನು ವಿತರಣ ಮಾಡಲಿದ್ದೇವೆ. ಕೆಐಎಡಿಬಿ ಕಾಯ್ದೆ ಕಾಲಂ 28/4 ಅಡಿ ಅಂತಿಮ ಅಸೂಚನೆ ಹೊರಡಿಸಿ ಸ್ವಾಧೀನಪಡಿಸಿಕೊಂಡ ಜಮೀನಿಗೆ ದರ ನಿಗದಿ ಪಡಿಸುವ ಸಲುವಾಗಿ ಸಂಬಂಧಪಟ್ಟ ಜಿಲ್ಲಾಧಿಕಾರಿ/ಕೆಐಎಡಿಬಿ ವಿಶೇಷ ಅಧಿಕಾರಿ, ಭೂ ದರ ನಿರ್ಧರಣಾ ಸಲಹಾ ಸಮಿತಿ ಸಭೆಯಲ್ಲಿ ಭೂ ಮಾಲಕರದೊಂದಿಗೆ ಸಮಾಲೋಚಿಸಿ ಮಾರ್ಗಸೂಚಿ ದರವನ್ನು ನಿಗದಿಪಡಿಸುತ್ತಾರೆ' ಎಂದು ಮಾಹಿತಿ ನೀಡಿದರು.

‘ಕೆಐಎಡಿಬಿ ವತಿಯಿಂದ ಭೂ ಸ್ವಾಧೀನಪಡಿಸಿದ ಜಮೀನಿಗೆ ಪಡೆಯುವ ಪರಿಹಾರ ಮೊತ್ತಕ್ಕೆ ಮೀರದ ಮೊತ್ತದಲ್ಲಿ ರೈತರು ಕೃಷಿ ಜಮೀನನ್ನು ಖರೀದಿಸಿದ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ.50ರಷ್ಟು ರಿಯಾಯ್ತಿ ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯ್ತಿ ನೀಡಲು ಅವಕಾಶ ಕಲ್ಪಿಸಲಾಗಿದೆ' ಎಂದು ಅವರು ಇದೇ ವೇಳೆ ವಿವರಿಸಿದರು.

‘ಕೆಐಎಡಿಬಿಯಿಂದ ಭೂ ಸ್ವಾಧೀನ ಪಡಿಸಿಕೊಳ್ಳುತ್ತಿರುವ ಕೈಗಾರಿಕಾ ಪ್ರದೇಶದ ಜಮೀನುಗಳಿಗೆ ಭೂ ಪರಿಹಾರದ ಬದಲಾಗಿ ಪ್ರತಿ ಎಕರೆ ಜಮೀನಿಗೆ ನೀಡುತ್ತಿರುವ ಅಭಿವೃದ್ಧಿಪಡಿಸಿದ 9,583 ಚದರಡಿ ವಿಸ್ತೀರ್ಣದಿಂದ 10,781 ಚದರಿ ವಿಸ್ತ್ರೀಣಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಈ ಅಭಿವೃದ್ಧಿಪಡಿಸಿದ ಜಮೀನನ್ನು ನೀಡುವ ಸಂದರ್ಭದಲ್ಲಿ ಮುದ್ರಾಂಕ ಶುಲ್ಕ ಶೇ.50ರಷ್ಟು ಮತ್ತು ನೋಂದಣಿ ಶುಲ್ಕದಲ್ಲಿ ಸಂಪೂರ್ಣ ವಿನಾಯಿ ಇರುತ್ತದೆ. ಜಮೀನುಗಳಿಗೆ ಪರಿಹಾರದ ಮೊತ್ತವನ್ನು ಸಂಬಂಧಪಟ್ಟ ಖಾತೆದಾರರು/ಹಿತಾಸಕ್ತದಾರರಿಗೆ ಆರ್‍ಟಿಜಿಎಸ್ ಮುಖಾಂತರ ಭೂಮಾಲಕರ ಖಾತೆಗಳಿಗೆ ನೇರವಾಗಿ ಹಣವನ್ನು ಜಮಾ ಮಾಡಲಾಗುತ್ತದೆ. ಇದರಿಂದ ಯಾವುದೇ ರೀತಿಯ ಸಮಸ್ಯೆ ಎದುರಾಗುವುದಿಲ್ಲ ಎಂದುಅವರು ಸ್ಪಷ್ಟಪಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X