ಕೋವಿಡ್ ಪ್ರಕರಣಗಳು ಬೆಳಕಿಗೆ ಬಂದ ಬಳಿಕ ದ.ಕ.ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶೂನ್ಯ ಪ್ರಕರಣ

ಸಾಂದರ್ಭಿಕ ಚಿತ್ರ (PTI)
ಮಂಗಳೂರು,ಮಾ.25: ದ.ಕ.ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ ಪ್ರಕರಣ ಪತ್ತೆಯಾಗಿಲ್ಲ. ಕೋವಿಡ್ ಸೋಂಕು ಪ್ರಕರಣಗಳು ಬೆಳಕಿಗೆ ಬಂದ ಬಳಿಕ ದ.ಕ.ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಶುಕ್ರವಾರ ಕೋವಿಡ್ ಪತ್ತೆಯಾಗದ ದಿನವಾಗಿದೆ. ಅಲ್ಲದೆ ಶುಕ್ರವಾರ ಒಬ್ಬರು ಕೋವಿಡ್ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ 1,35,480 ಪಾಸಿಟಿವ್ ಪ್ರಕರಣ ದಾಖಲಾಗಿದೆ. ಸೋಂಕಿತರ ಪೈಕಿ ಒಟ್ಟು 1,33,620 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ. ಅಲ್ಲದೆ ಈವರೆಗೆ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,850ಕ್ಕೇರಿದೆ. ಸದ್ಯ 10 ಸಕ್ರಿಯ ಪ್ರಕರಣವಿದೆ.
Next Story