Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತುಮಕೂರು: ಸಭೆಗೆ ಹಾಜರಾಗದ ಅಧಿಕಾರಿಗಳ...

ತುಮಕೂರು: ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ; ಜಿಲ್ಲಾಧಿಕಾರಿ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ25 March 2022 11:39 PM IST
share
ತುಮಕೂರು: ಸಭೆಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣ; ಜಿಲ್ಲಾಧಿಕಾರಿ ಎಚ್ಚರಿಕೆ

ತುಮಕೂರು,ಮಾ.25: ಪ.ಜಾತಿ,ಪಂಗಡದ ಸಮುದಾಯಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಜರುಗುವ ಸಭೆಗಳಿಗೆ ಹಾಜರಾಗದ ಅಧಿಕಾರಿಗಳ ವಿರುದ್ಧ ಅಟ್ರಾಸಿಟಿ ಪ್ರಕರಣವನ್ನು ದಾಖಲಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಎಚ್ಚರಿಕೆ ನೀಡಿದ್ದಾರೆ. 

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜರುಗಿದ  ವಿಶೇಷ ಘಟಕ(ಎಸ್‍ಸಿಪಿ)ಹಾಗೂ ಗಿರಿಜನ ಉಪಯೋಜನೆ (ಟಿಎಸ್‍ಪಿ)ಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ  ಜಿಲ್ಲೆಯಲ್ಲಿ ಎಸ್‍ಸಿಪಿ,ಟಿಎಸ್‍ಪಿ ಯೋಜನೆಯಡಿ ಪ.ಜಾತಿ ಮತ್ತು ವರ್ಗದವರ ಅಭಿವೃದ್ಧಿಗಾಗಿ ನಿಗಧಿಯಾಗಿದ್ದ ಅನುದಾನ ಬಳಕೆಗೆ ಸಂಬಂಧಿಸಿದಂತೆ ವರ್ಷಾಂತ್ಯಕ್ಕೆ ಸಾಧಿಸಿದ ಇಲಾಖಾವಾರು ಪ್ರಗತಿ ಪರಿಶೀಲಿಸಿದ ಅವರು,ಕಡಿಮೆ ಹಾಗೂ ಶೂನ್ಯ ಪ್ರಗತಿ ಸಾಧಿಸಿದ ತಿಪಟೂರು ನಗರಸಭೆ, ಚಿಕ್ಕನಾಯಕನಹಳ್ಳಿ ಪುರಸಭೆ,ಗುಬ್ಬಿ ಪಟ್ಟಣ ಪಂಚಾಯತಿ ಅಧಿಕಾರಿಗಳಿಂದ ಕಡಿಮೆ ಸಾಧನೆಗೆ ಕಾರಣವೇನೆಂದು ಮಾಹಿತಿ ಪಡೆದರಲ್ಲದೆ,ನಿಗಧಿತ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಉತ್ತಮ ಆರ್ಥಿಕ ಪ್ರಗತಿ ಸಾಧಿಸಿರುವ ತುಮಕೂರು ಮಹಾನಗರಪಾಲಿಕೆ, ಕೊರಟಗೆರೆ ಪಟ್ಟಣ ಪಂಚಾಯತಿ, ಶಿರಾ ನಗರಸಭೆಗಳ ಸಾಧನೆಯ ಬಗ್ಗೆ   ಮೆಚ್ಚುಗೆ ವ್ಯಕ್ತಪಡಿಸಿದರು.  

ನಂತರ ಜಿಲ್ಲಾ ಕೈಗಾರಿಕಾ ಕೇಂದ್ರ, ಪಂಚಾಯತ್ ರಾಜ್ ಇಲಾಖೆ, ತೋಟಗಾರಿಕೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಕಾರ, ಮೀನುಗಾರಿಕೆ,ಬೆಸ್ಕಾಂ,ಪಶು ಸಂಗೋಪನೆ, ರೇಷ್ಮೆ ಇಲಾಖೆಗಳು 2021-22ನೇ ಸಾಲಿನಲ್ಲಿ ಎಸ್‍ಸಿಪಿ,ಟಿಎಸ್‍ಪಿ ಯೋಜನೆಯಡಿ ಬಿಡುಗಡೆಯಾದ ಅನುದಾನವನ್ನು ಶೇ.100ರಷ್ಟು ವೆಚ್ಚ ಮಾಡಿ ಪರಿಶಿಷ್ಟರ ಅಭ್ಯುದಯಕ್ಕೆ ವಿನಿಯೋಗಿಸಲಾಗಿದೆ ಎಂದು ಸಂಬಂಧಿಸಿದ ಇಲಾಖಾವಾರು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. 

ಸಭೆಗೆ ಹಾಜರಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಶಿರಾ ನಗರಸಭೆ ಮುಖ್ಯಾಧಿಕಾರಿಗಳಿಗೆ ಕಾರಣ ಕೇಳಿ ನೋಟೀಸ್ ನೀಡಲು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ ಅವರಿಗೆ ಸೂಚನೆ ನೀಡಿದರು. 
ಸಭೆಯ ನಂತರ ಮ್ಯಾನ್ಯುಯಲ್ ಸ್ಕ್ಯಾವೆಂಜರ್ಸ್‍ಗಳ ಅಂತಿಮ ಪಟ್ಟಿಗೆ ಸಂಬಂಧಿಸಿದಂತೆ ತಹಶೀಲ್ದಾರರು,ಮನೆ ಮಾಲೀಕರಿಂದ ಲಿಖಿತ ಮಾಹಿತಿ ಪಡೆದು ಅಂತಿಮ ಪಟ್ಟಿಯನ್ನು ತಯಾರಿಸಬೇಕೆಂದು ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕ ಆಂಜನಪ್ಪ ಅವರಿಗೆ ಸೂಚನೆ ನೀಡಿದರು. 

ಮಧುಗಿರಿ ಪುರಸಭೆ ವ್ಯಾಪ್ತಿಯಲ್ಲಿ ಒಳಚರಂಡಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಹಾಗೂ ಅಲೆಮಾರಿ ಜನಾಂಗದವರಿಗೆ ನಿವೇಶನ ಒದಗಿಸಲು ತಯಾರಿಸಿರುವ ಪಟ್ಟಿಯನ್ನು ಮರು ಪರಿಶೀಲಿಸಬೇಕೆಂದು ಮುಖ್ಯಾಧಿಕಾರಿ ನಜ್ಮಾ ಅವರಿಗೆ ಸೂಚನೆ ನೀಡಿದರು. 

ಈ ಸಂದರ್ಭದಲ್ಲಿ ಬಾಲ ಕಾರ್ಮಿಕತೆಯನ್ನು ತಡೆಯುವ ನಿಟ್ಟಿನಲ್ಲಿ ಅರಿವು ಮೂಡಿಸುವ ಸಲುವಾಗಿ ಕಾರ್ಮಿಕ ಇಲಾಖೆಯಿಂದ ಹೊರತರಲಾದ ಭಿತ್ತಿಪತ್ರವನ್ನು ಜಿಲ್ಲಾಧಿಕಾರಿಗಳು ಬಿಡುಗಡೆ ಮಾಡಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ:ಕೆ.ವಿದ್ಯಾಕುಮಾರಿ,ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ,ತೋಟಗಾರಿಕೆ ಇಲಾಖೆ ಉಪನಿರ್ದೇಶಕ ರಘು,ರೇಷ್ಮೆ ಇಲಾಖೆ ಉಪನಿರ್ದೇಶಕ ಬಾಲಕೃಷ್ಣಪ್ಪ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ,ಕಾರ್ಮಿಕ ಅಧಿಕಾರಿ ರಮೇಶ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜ್, ವಿವಿಧ ನಗರಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸೇರಿದಂತೆ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X