ಮುಲ್ಕಿ: ರೈಲಿನಡಿಗೆ ಬಿದ್ದು ವ್ಯಕ್ತಿ ಮೃತ್ಯು

ಮಂಗಳೂರ, ಮಾ.26: ವ್ಯಕ್ತಿಯೊಬ್ಬ ಚಲಿಸುತ್ತಿದ್ದ ರೈಲಿನ ಡಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪು ಸಮೀಪ ಶುಕ್ರವಾರ ತಡರಾತ್ರಿ ಸಂಭವಿಸಿದೆ.
ಮೃತರನ್ನು ಪಕ್ಷಿಕೆರೆ ಪಂಜ ಮೂಲದ ನಿವಾಸಿ ದಿನೇಶ್ ಬಂಗೇರ ಎಂದು ಗುರುತಿಸಲಾಗಿದೆ.
ಮೃತ ದಿನೇಶ್ ಬಂಗೇರ ಅವರು ತೋಕೂರು ಲೈಟ್ ಹೌಸ್ ಸಮೀಪ ಸೆಲೂನ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಘಟನೆಯಿಂದ ದಿನೇಶ್ ಅವರ ಮೃತದೇಹ ಛಿದ್ರವಾಗಿದೆ. ಘಟನಾ ಸ್ಥಳಕ್ಕೆ ಮುಲ್ಕಿ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಬಳಿಕ ಮೃತದೇಹವನ್ನು ಮುಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
Next Story