ಉತ್ತರಪ್ರದೇಶ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕನಾಗಿ ಅಖಿಲೇಶ್ ಯಾದವ್ ಆಯ್ಕೆ

ಲಕ್ನೊ: ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಲಿದ್ದಾರೆ.
ಪಕ್ಷದ 111 ಶಾಸಕರು ಯಾದವ್ ಅವರನ್ನು ಸಮಾಜವಾದಿ ಪಕ್ಷದ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಿದ್ದಾರೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ವಿರೋಧ ಪಕ್ಷಗಳು ಪ್ರಸ್ತಾಪಿಸುವ ವಿಷಯಗಳ ಕುರಿತು ಚರ್ಚಿಸಲು ಯಾದವ್ ಸಮಾಜವಾದಿ ಪಕ್ಷದ ಮಿತ್ರಪಕ್ಷಗಳ ನಾಯಕರನ್ನು ಭೇಟಿ ಮಾಡಲಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಅಖಿಲೇಶ್ ಯಾದವ್ ಅವರು ಉತ್ತರಪ್ರದೇಶದ ಮೈನ್‌ಪುರಿ ಜಿಲ್ಲೆಯ ಕುಟುಂಬದ ಭದ್ರಕೋಟೆಯಾದ ಕರ್ಹಾಲ್‌ನಿಂದ ಮೊದಲ ಬಾರಿ ಶಾಸಕರಾಗಿ ಆಯ್ಕೆಯಾದ ನಂತರ ಈ ವಾರದ ಆರಂಭದಲ್ಲಿ ಅಝಂಗಢ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
Next Story





