Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. 'ಹಿಜಾಬ್ ಧರಿಸಿದರೆ ಪರೀಕ್ಷೆಗೆ...

'ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶವಿಲ್ಲ' ಎಂಬ ಸರಕಾರದ ಆದೇಶ ಸರಿಯಲ್ಲ: ಡಿ.ಕೆ.ಶಿವಕುಮಾರ್

''ಮಕ್ಕಳಿಗೆ ತಿಳಿ ಹೇಳುವ ಕೆಲಸ ಆಗಬೇಕು''

ವಾರ್ತಾಭಾರತಿವಾರ್ತಾಭಾರತಿ26 March 2022 6:46 PM IST
share
ಹಿಜಾಬ್ ಧರಿಸಿದರೆ ಪರೀಕ್ಷೆಗೆ ಅವಕಾಶವಿಲ್ಲ ಎಂಬ ಸರಕಾರದ ಆದೇಶ ಸರಿಯಲ್ಲ: ಡಿ.ಕೆ.ಶಿವಕುಮಾರ್

ಬೆಂಗಳೂರು, ಮಾ. 26: ‘ಹಿಜಾಬ್ ಧರಿಸಿದರೆ ಎಸ್ಸೆಸೆಲ್ಸಿ ಪರೀಕ್ಷೆಗೆ ಅವಕಾಶವಿಲ್ಲ ಎಂಬ ಸರಕಾರದ ಆದೇಶ ಸರಿಯಲ್ಲ. ಆದರೆ, ಮಕ್ಕಳ ವಿದ್ಯಾಭ್ಯಾಸ ಬಹಳ ಮುಖ್ಯ. ತಂದೆ-ತಾಯಿಗಳಿರಬಹುದು, ಸರಕಾರ ಇರಬಹುದು ಅವರ ಶಿಕ್ಷಣದ ಬಗ್ಗೆ ಗಮನಹರಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದಿಲ್ಲಿ ತಿಳಿಸಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಮಕ್ಕಳು ತಪ್ಪು ಮಾಡಬಹುದು, ಅವರಿಗೆ ಹಠ ಇರಬಹುದು. ಹಾಗಂತ ಅವರ ಭವಿಷ್ಯ ಹಾಳಾಗಲು ಉತ್ತೇಜನ ಸರಿಯಲ್ಲ. ಕೂತು ಅವರೊಂದಿಗೆ ಮಾತಾಡಿ ಮನವೊಲಿಸಬೇಕು. ಧರ್ಮಗುರುಗಳು, ತಂದೆ-ತಾಯಂದಿರು, ಶಿಕ್ಷಕರನ್ನು ಬಳಸಿ, ಅವರಿಗೂ ಮನದಟ್ಟು ಮಾಡಿಕೊಟ್ಟು, ಮಕ್ಕಳಿಗೆ ತಿಳಿ ಹೇಳುವ ಕೆಲಸ ಆಗÀಬೇಕು. ಏಕೆಂದರೆ ಮಕ್ಕಳು, ಶಿಕ್ಷಕರ ಮಾತನ್ನು ಗೌರವ ಕೊಟ್ಟು ಕೇಳುತ್ತಾರೆ' ಎಂದು ತಿಳಿಸಿದರು.

‘ತಾಯಿ ಮೊದಲ ಗುರು, ಶಿಕ್ಷಕರು ಎರಡನೇ ಗುರು. ಯಾರ್ಯಾರು ಯಾವ್ಯಾವ ಸಂದರ್ಭದಲ್ಲಿ ಏನೇನು ಮಾಡಬೇಕೋ ಅದನ್ನು ಮಾಡಬೇಕು. ‘ಶಾಲಾ ಮಕ್ಕಳಿಗೆ ದುಪ್ಪಟ್ಟ ಹಾಕಿಕೊಳ್ಳಲು ಅವಕಾಶ ಕೊಡಿ' ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಸಂವಿಧಾನ ಏನೆಲ್ಲಾ ಹೇಳುತ್ತದೋ, ಅಧಿಕಾರ, ಅವಕಾಶ ನೀಡಿದೆಯೋ ಅದರ ಪರವಾಗಿ ಕಾಂಗ್ರೆಸ್ ಇರುತ್ತದೆ. ನಮಗೆ ಅದೇ ಬೈಬಲ್, ಅದೇ ಖುರಾನ್, ಅದೇ ಭಗವದ್ಗೀತೆ. ಇದಕ್ಕಿಂತ ಹೆಚ್ಚಿಗೆ ನಾನೇನೂ ಹೇಳಲಾರೆ' ಎಂದು ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದರು.

‘ಹಿಜಾಬ್ ವಿಚಾರವಾಗಿ ಈಗಾಗಲೇ ಕೋರ್ಟ್ ತೀರ್ಪು ಕೊಟ್ಟಿದೆ. ಕೆಲವರು ಅದನ್ನು ಒಪ್ಪುತ್ತಾರೆ. ಕೆಲವರು ಅದನ್ನು ಒಪ್ಪುವುದಿಲ್ಲ. ಸುಪ್ರೀಂ ಕೋರ್ಟ್‍ಗೂ ಹೋಗಬಹುದು. ಇವತ್ತಲ್ಲ ನಾಳೆ ಆದೇಶ ಬಂದು ವಿಷಯ ಇತ್ಯರ್ಥವಾಗಲಿದೆ. ನ್ಯಾಯಾಲಯದ ತೀರ್ಪು ಸರಿ ಇಲ್ಲ ಎಂದು ನಾನು ಹೇಳುವುದಿಲ್ಲ. ತೀರ್ಪು ತೀರ್ಪೆ. ಯಾರು ಬೇಕಾದರೂ ಹೋಗಿ ಅವರ ವಿಚಾರವನ್ನು ಮಂಡನೆ ಮಾಡಬಹುದು' ಎಂದು ಅವರು ನುಡಿದರು.

‘ಹಿಜಾಬ್ ಮತ್ತು ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಅವರೇ ಉತ್ತರ ಕೊಡುತ್ತಾರೆ. ಈಗಾಗಲೇ ಅವರು ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅವರಿಗೆ ಎಲ್ಲ ಧರ್ಮಗಳು, ಧರ್ಮಪೀಠಗಳು, ಸ್ವಾಮೀಜಿಗಳ ಬಗ್ಗೆ ಅಪಾರ ಗೌರವ ಇದೆ. ಅವರು ಸಿಎಂ ಆಗಿದ್ದಾಗ ಎಲ್ಲ ಧರ್ಮ ಪೀಠಗಳಿಗೆ ಅನೇಕ ಸಹಾಯ ಮಾಡಿದ್ದಾರೆ. ಅವರು ಏನು ಮಾತಾಡಿದ್ದಾರೋ ಅದಕ್ಕೆ ಅವರೇ ಉತ್ತರ ನೀಡಲಿದ್ದಾರೆ' ಎಂದು ಶಿವಕುಮಾರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X