ಐಪಿಎಲ್: ಕೆಕೆಆರ್ಗೆ 132 ರನ್ ಗುರಿ ನೀಡಿದ ಚೆನ್ನೈ
ಧೋನಿ ಅರ್ಧಶತಕ

Photo/IPL
ಮುಂಬೈ: ಮಾಜಿ ನಾಯಕ ಎಂ.ಎಸ್. ಧೋನಿ ಸಿಡಿಸಿರುವ ಅರ್ಧಶತಕದ ನೆರವಿನಿಂದ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡ ವಾಂಖೆಡೆ ಸ್ಟೇಡಿಯಂನಲ್ಲಿ ಶನಿವಾರ ಆರಂಭವಾದ ಐಪಿಎಲ್ನ ಉದ್ಘಾಟನಾ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದೆ.
ಮೊದಲು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಚೆನ್ನೈ ತಂಡವು ಇನಿಂಗ್ಸ್ನ ಮೊದಲ ಓವರ್ನಲ್ಲಿ ಆರಂಭಿಕ ಬ್ಯಾಟರ್ ಋತುರಾಜ್ ಗಾಯಕ್ವಾಡ್(0)ವಿಕೆಟನ್ನು ಕಳೆದುಕೊಂಡು ಕಳಪೆ ಆರಂಭ ಪಡೆಯಿತು. 61 ರನ್ಗೆ ಐದು ವಿಕೆಟ್ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿದ್ದ ಚೆನ್ನೈಗೆ ಆಸರೆಯಾದ ಧೋನಿ(50 ರನ್, 38 ಎಸೆತ, 7 ಬೌಂ., 1 ಸಿ.) ಹಾಗೂ ನಾಯಕ ರವೀಂದ್ರ ಜಡೇಜ(26, 28 ಎಸೆತ, 1 ಸಿಕ್ಸರ್) ಆರನೇ ವಿಕೆಟಿಗೆ ಮುರಿಯದ ಜೊತೆಯಾಟದಲ್ಲಿ 70 ರನ್ ಸೇರಿಸಿ ತಂಡವು ಗೌರವಾರ್ಹ ಮೊತ್ತ ಗಳಿಸಲು ನೆರವಾದರು.
ಕೆಕೆಆರ್ ಪರ ಹಿರಿಯ ವೇಗದ ಬೌಲರ್ ಉಮೇಶ್ ಯಾದವ್(2-20) 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ (1-23)ಹಾಗೂ ಆ್ಯಂಡ್ರೆ ರಸೆಲ್(1-38) ತಲಾ ಒಂದು ವಿಕೆಟ್ ಪಡೆದರು.