ಮಾ.28ರಂದು ಪಿಎಂಇಜಿಪಿ ಅರಿವು ಕಾರ್ಯಕ್ರಮ
ಉಡುಪಿ : ಬೆಂಗಳೂರಿನ ಖಾದಿ ಮತ್ತು ಗ್ರಾಮೋದ್ಯೋಗ ಆಯೋಗ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಉಡುಪಿ, ಜಿಲ್ಲಾ ಕೈಗಾರಿಕಾ ಕೇಂದ್ರ ಉಡುಪಿ ಹಾಗೂ ಗ್ರಾಮ ಪಂಚಾಯತ್ ಪಡುಬಿದ್ರಿ, ಹೆಜಮಾಡಿ ಮತ್ತು ಫಲಿಮಾರು ಇವರ ಸಹಯೋಗದಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಅಡಿಯಲ್ಲಿ ಅರಿವು ಮೂಡಿಸುವ ಕಾರ್ಯಕ್ರಮದ ಉದ್ಘಾಟನೆ ಮಾ.೨೮ರಂದು ಅಪರಾಹ್ನ ೩:೦೦ ಗಂಟೆಗೆ ಪಡುಬಿದ್ರಿ ಗ್ರಾಮಪಂಚಾಯತ್ ಸಭಾಭವನದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ನಿರ್ದೇಶಕ ಮಿಥುನ್ ಆರ್ ಹೆಗ್ಡೆ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Next Story