ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ

ಮಂಗಳೂರು: ಕರ್ನಾಟಕ ರಾಜ್ಯ ಸರ್ಕಾರದ ವಿರೋಧ ಪಕ್ಷದ ವಿಪಕ್ಷ ಉಪ ಸಭಾ ನಾಯಕ ಯು.ಟಿ. ಖಾದರ್ ಹಾಗೂ ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಉಳ್ಳಾಲ ಪುರಸಭೆ ಮಾಜಿ ಸದಸ್ಯ ಅಬ್ದುಲ್ ಅಝೀಝ್ ಹಾಗೂ ಸಾಮಾಜಿಕ ಕಾರ್ಯಕರ್ತ ಸೋಶಿಯಲ್ ಫಾರೂಕ್ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯಾದ್ಯಂತ ಹಿಜಾಬ್ ವಿಷಯದ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ಮರು ಪರೀಕ್ಷೆ ನೆರವೇರಿಸಲು ಸರಕಾರದ ವತಿಯಿಂದ ವ್ಯವಸ್ಥೆ ಮಾಡಬೇಕು, ಎನ್.ಆರ್.ಸಿ. ಪ್ರತಿಭಟನೆಯ ವೇಳೆ ಪೋಲಿಸ್ ಇಲಾಖೆ ಅಮಾಯಕರ ವಿರುದ್ಧ ದಾಖಲಿಸಿರುವ ಪ್ರಕರಣಗಳನ್ನು ಸರಕಾರ ಹಿಂಪಡೆಯಬೇಕು, ರಮಝಾನ್ ತಿಂಗಳಲ್ಲಿ ಕಾನೂನು ಶಾಂತಿ-ಸುವ್ಯವಸ್ಥೆ ಭಂಗವಾಗದಂತೆ ಪೊಲೀಸ್ ಇಲಾಖೆಯಿಂದ ಹೆಚ್ಚುವರಿ ವ್ಯವಸ್ಥೆ ಮಾಡುವುದು, ದಕ್ಷಿಣ ಕನ್ನಡ ಉಳ್ಳಾಲದ ನಗರ ಆರೋಗ್ಯ ಕೇಂದ್ರ ಆಸ್ಪತ್ರೆಯನ್ನು ಪೂರ್ಣ ಪ್ರಮಾಣದ ಆಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಿಸಲಬೇಕು ಮುಂತಾದ ಬೇಡಿಕೆಗಳನ್ನು ಮುಂದಿಟ್ಟು ಶಾಸಕ ಯು.ಟಿ. ಖಾದರ್ ಹಾಗೂ ಕುಮಾರಸ್ವಾಮಿ ಅವರಿಗೆ ಉಳ್ಳಾಲ ಪುರಸಭೆ ಮಾಜಿ ಸದಸ್ಯ ಅಬ್ದುಲ್ ಅಝೀಝ್, ಹಾಗೂ ಸಾಮಾಜಿಕ ಕಾರ್ಯಕರ್ತ ಸೋಶಿಯಲ್ ಫಾರೂಕ್ ಮನವಿ ಅರ್ಪಿಸಿದರು.