Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ...

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 200ನೇ ರಕ್ತದಾನ ಶಿಬಿರ; 93 ಯುನಿಟ್ ರಕ್ತ ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ27 March 2022 9:47 AM IST
share
ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ 200ನೇ ರಕ್ತದಾನ ಶಿಬಿರ; 93 ಯುನಿಟ್ ರಕ್ತ ಸಂಗ್ರಹ

ಮಂಗಳೂರು: ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಇದರ 200ನೇ ರಕ್ತದಾನ ಶಿಬಿರವು ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಪ್ರೈವೇಟ್ ಲಿಮಿಟೆಡ್ ಜಂಟಿ ಆಶ್ರಯದಲ್ಲಿ ಲಯನ್ಸ್ ಕ್ಲಬ್ ಕುಡ್ಲ ಹಾಗೂ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ರಕ್ತನಿಧಿ ಮಂಗಳೂರು ಇದರ ಸಹಯೋಗದೊಂದಿಗೆ ಮಂಗಳೂರಿನ ಬಲ್ಮಠದಲ್ಲಿರುವ ಕರ್ನಾಟಕ ಥಿಯೋಲೋಜಿಕಲ್ ಕಾಲೇಜು ಬಿಷಪ್ ಜತ್ತನ್ನ ಆಡಿಟೋರಿಯಂ ನಲ್ಲಿ ಯಶಸ್ವಿಯಾಗಿ ನಡೆಯಿತು.

ಕಾರ್ಯಕ್ರಮವನ್ನು ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಶಾಂತರಾಂ ಶೆಟ್ಟಿ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ರಕ್ತಕ್ಕೆ ಯಾವುದೇ ಜಾತಿ, ಧರ್ಮ ಇಲ್ಲ. ರಕ್ತಕ್ಕೆ ಇರುವುದು ಒಂದೇ ಬಣ್ಣ. ಒಬ್ಬರ ಜೀವ ಉಳಿಸಲು ರಕ್ತವು ಶ್ರೇಷ್ಠ ಪಾತ್ರ ವಹಿಸುತ್ತದೆ. ಸೈನಿಕರು, ರಕ್ತದಾನಿಗಳು ಇಬ್ಬರೂ ಒಂದೇ. ಗಡಿಯಲ್ಲಿ ಕಾಯುವ ಯೋಧರು ಮತ್ತು ರಕ್ತದಾನ ಮಾಡುವವರು ಒಂದೇ ಸಮಾನ. ಅವರು ದೇಶವನ್ನು ಕಾಯಲು ರಕ್ತದಾನ ಮಾಡಿದರೆ, ಇವರು ದೇಹ ಕಾಯಲು ರಕ್ತದಾನ ಮಾಡುತ್ತಾರೆ ಎಂದು ಹೇಳಿದರು.

ನಂತರ ಮಾತನಾಡಿದ ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಉಪಾಧ್ಯಕ್ಷ  ಮೈಕಲ್ ವೇಗಸ್, 200ನೇ ರಕ್ತದಾನ ಶಿಬಿರ ಮಾಡುತ್ತಿರುವ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ತಂಡವನ್ನು ಪ್ರಶಂಸಿಸುತ್ತಾ, ಸಂಸ್ಥೆಯನ್ನು ಪ್ರೊತ್ಸಾಹಿಸುವ ಸಲುವಾಗಿ ದೂರದ ಕೊಡಗಿನಿಂದ ನಾವು ಆಗಮಿಸಿದ್ದೇವೆ. ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಮತ್ತು ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಗೆ ಬಹುದೊಡ್ಡ ರಕ್ತದ ಸಂಬಂಧವಿದೆ. ಕೊಡಗು ಭಾಗದ ರೋಗಿಗಳಿಗೆ ರಕ್ತದ ಅವಶ್ಯಕತೆ ಬಂದರೆ ನಮ್ಮ ಕರೆಗೆ ತಕ್ಷಣ ಸ್ಪಂದಿಸುವುದು ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಸದಸ್ಯರು. ಮಂಗಳೂರು, ಸುಳ್ಯ, ಉಡುಪಿ ಭಾಗದಲ್ಲೂ ಮಾತ್ರವಲ್ಲದೇ ದೂರದ ಗಲ್ಫ್ ರಾಷ್ಟ್ರಗಳಲ್ಲಿಯೂ ರಕ್ತದಾನದ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆಯುತ್ತಾರೆ ಎಂದು ಬ್ಲಡ್ ಹೆಲ್ಪ್ ಲೈನ್ ಸಂಸ್ಥೆಯ ಕಾರ್ಯವೈಕರಿಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಗೌರವ ಸಲಹೆಗಾರರಾದ ಮುಸ್ತಫ ದೆಮ್ಮೆಲೆ ಮಾತನಾಡಿ, ಮಾನವನಿಗೆ ಮಾನವನೇ ಸ್ವಾವಲಂಬಿ. ನಮ್ಮೊಳಗೇ ಯಾವುದೇ ಜಾತಿ ಧರ್ಮ ಅಡ್ಡಬಾರದೇ ಇನ್ನೊಬ್ಬರಿಗೆ ಸಹಾಯ ಮಾಡುವ ಮನೋಭಾವನೆ ಬೆಳೆಸಿಕೊಂಡರೆ ಯಾವುದೇ ತೊಡಕು ಬರಲು ಸಾಧ್ಯವಿಲ್ಲ. ನಮ್ಮ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕದ ಸಹೋದರರು ಕೇವಲ ರಕ್ತದಾನ ಮಾತ್ರವಲ್ಲದೇ, ಕೊರೋನ ಹಾಗೂ ಇನ್ನಿತರ ಸಂದರ್ಭದಲ್ಲಿ ಅನೇಕ ಸಮಾಜಮುಖಿ ಕೆಲಸ ಮಾಡುತ್ತಾ ಬಂದಿದ್ದಾರೆ ಎಂದು ಸಂಸ್ಥೆಯ ಕೆಲಸ ಕಾರ್ಯಗಳ ಬಗ್ಗೆ ವಿವರಿಸಿದರು.

ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ʼಕೋಸ್ಟಲ್ ಫ್ರೆಂಡ್ಸ್ ಮಂಗಳೂರುʼ ಇದರ ಅಧ್ಯಕ್ಷರಾದ ಶರೀಫ್ ವಳಾಲ್ ಮತ್ತು ಮುನ್ನ ಕಮ್ಮರಡಿ ಆಗಮಿಸಿ ಶುಭಹಾರೈಸಿದರು. ಇದೇ ವೇಳೆ ಕೊಡಗು ಬ್ಲಡ್ ಡೋನರ್ಸ್ ವತಿಯಿಂದ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಜೀವದಾನಿಯಾದ 93 ಜನಸ್ನೇಹಿ ರಕ್ತದಾನಿಗಳು

ಯಶಸ್ವಿ ರಕ್ತದಾನ ಶಿಬಿರದಲ್ಲಿ 93 ಮಂದಿ ಜನಸ್ನೇಹಿ ರಕ್ತದಾನಿಗಳು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡಿ ಮಾನವೀಯತೆ ಮೆರೆದರು.

ಈ ಸಂದರ್ಭ ಕರ್ನಾಟಕ ಕ್ರಿಸ್ಚಿಯನ್ ಎಜುಕೇಷನ್ ಸೊಸೈಟಿ ಇದರ ಪ್ರಿನ್ಸಿಪಾಲರಾದ ಡಾ. ಎಚ್.ಎಂ ವಾಟ್ಸನ್, ಲಯನ್ಸ್ ಕ್ಲಬ್ ಕುಡ್ಲ ಇದರ ಅಧ್ಯಕ್ಷರಾದ ಶ್ರೀಧರ್ ರಾಜ್ ಶೆಟ್ಟಿ, ರೆಡ್ ಕ್ರಾಸ್ ಸಂಸ್ಥೆಯ ಜೆ.ಎನ್ ಭಟ್, ಪ್ರವೀಣ್ ಕುಮಾರ್, ಕೊಡಗು ಬ್ಲಡ್ ಡೋನರ್ಸ್ ಸಂಸ್ಥೆಯ ಅಧ್ಯಕ್ಷರಾದ ಖಲೀಲ್ ಕ್ರಿಯೇಟಿವ್, ಕಾರ್ಯದರ್ಶಿ  ಸುಕುಮಾರ್, ಕೊಸ್ಟಲ್ ಫ್ರೆಂಡ್ಸ್ ಮಂಗಳೂರು ಸದಸ್ಯರಾದ ನೌಫಲ್, ಸಲಾಂ ಸಮ್ಮಿ ಹಾಗೂ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಕಾರ್ಯನಿರ್ವಾಹಕರೂ,  ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಕಂಪೆನಿಯ ಸಿಬ್ಬಂದಿ ವರ್ಗದವರೂ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಸಿಬ್ಬಂದಿ ಉಪಸ್ಥಿತರಿದ್ದರು.

ಅತೀ ವಿರಳವಾದ ಬಾಂಬೆ ಬ್ಲಡ್ ಗ್ರೂಪ್ ಗ್ರೂಪಿನ ರಕ್ತದ ಬೇಡಿಕೆ ಬಂದಾಗ ಬ್ಲಡ್ ಹೆಲ್ಪ್ ಲೈನ್ ಕರ್ನಾಟಕ ಸಂಸ್ಥೆಯ ಮನವಿಗೆ ಸದಾ ಸ್ಪಂದಿಸುತ್ತಾ ತನ್ನೆಲ್ಲಾ ಕಾರ್ಯಗಳನ್ನು ಬದಿಗೊತ್ತಿ ನಿರಂತರವಾಗಿ ರಕ್ತದಾನ ಮಾಡಿ ಜೀವದಾನಿಯಾಗುವ ಬೆನ್ನಿ ಸೆಬಾಸ್ಟಿಯನ್ ರನ್ನು 
(ಗೋಲ್ಡನ್ ಡೋನರ್ ಓ ಪಾಸಿಟಿವ್ ಬಾಂಬೆ ಗ್ರೂಪ್ ) ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ರಿಪ್ ಶಿಪ್ ವರ್ಲ್ಡ್ ವೆಂಚರ್ಸ್ ಕಂಪೆನಿಯ ಸಹ ಸಂಸ್ಥಾಪಕರಾದ ಪಾಲ್ದೊರಾಯ್ ಸ್ವಾಗತಿಸಿ, ನಿರೂಪಣೆ ಮಾಡಿದರು. ಮ್ಯಾನೇಜಿಂಗ್ ಡೈರೆಕ್ಟರ್ ರಿಪ್ಸನ್ ಜೆರೆಮಿಯಾ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X