Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಭಾರತೀಯ ಸಮಾಜದಲ್ಲಿ ಸಂಸ್ಕೃತ ಭಾಷೆಯ...

ಭಾರತೀಯ ಸಮಾಜದಲ್ಲಿ ಸಂಸ್ಕೃತ ಭಾಷೆಯ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ವಾರ್ತಾಭಾರತಿವಾರ್ತಾಭಾರತಿ27 March 2022 2:57 PM IST
share
ಭಾರತೀಯ ಸಮಾಜದಲ್ಲಿ ಸಂಸ್ಕೃತ ಭಾಷೆಯ ಕೊಡುಗೆ ಅಪಾರ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

ಬೆಂಗಳೂರು : ಭಾರತೀಯ ಇತಿಹಾಸ, ತತ್ವಶಾಸ್ತ್ರ, ಸಂಸ್ಕೃತಿ, ಕಲೆ ಮತ್ತು ಸೌಂದರ್ಯ ಶಾಸ್ತ್ರದ ಪುನರ್ನಿರ್ಮಾಣವನ್ನು ಸಂಸ್ಕೃತ ಶಿಕ್ಷಣ ಮತ್ತು ಸಂಶೋಧನೆಯ ಸಹಾಯದಿಂದ ಸಾಧಿಸಬಹುದು ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಆಯೋಜಿಸಿದ್ದ 59ನೇ ಅಖಿಲ ಭಾರತ ಶಾಸ್ತ್ರೀಯ ಸ್ಪರ್ಧೆ ಸಮಾರಂಭವನ್ನು ಉದ್ಘಾಟಿಸಿ, ಅವರು ಮತಾನಾಡಿದರು.

ಸಂಸ್ಕೃತ ಭಾಷೆಯು ಜ್ಞಾನ ಸಂಶ್ಲೇಷಣೆಯ ಶ್ರೀಮಂತ ಸಂಪ್ರದಾಯವನ್ನು ಹೊಂದಿದೆ, ಇದು ಶಿಕ್ಷಣದ ಎಲ್ಲಾ ಶಾಖೆಗಳ ಒಟ್ಟಾರೆ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದೆ. ಸಂಸ್ಕೃತ ಭಾಷೆ ನಮ್ಮ ದೇಶದ ಪ್ರಾಚೀನ ಭಾಷೆ, ಎಲ್ಲಾ ಪ್ರಾಚೀನ ಗ್ರಂಥಗಳು ಮತ್ತು ವೇದಗಳು ಸಂಸ್ಕೃತ ಭಾಷೆಯಲ್ಲಿವೆ. ಅದರಲ್ಲಿ ದೇಶದ ಸಂಸ್ಕೃತಿ ಅಡಗಿದೆ. ಸಂಸ್ಕೃತ ಭಾಷೆ ಆಧುನಿಕ ಕಾಲದಲ್ಲಿ ಪ್ರಸ್ತುತವಾಗಿದೆ. ಸಂಸ್ಕೃತ ಅಕ್ಷರಗಳು ಮತ್ತು ಸ್ವರಗಳ ಉಚ್ಚಾರಣೆಯಿಂದ ಮಾನವನ ಮೆದುಳಿನ ರಕ್ತನಾಳಗಳು ಮತ್ತು ಅಪಧಮನಿಗಳು ಚೆನ್ನಾಗಿ ಕಾರ್ಯನಿರ್ವಹಿಸುತ್ತವೆ ಎಂಬ ಅಂಶವನ್ನು ಕೆಲವು ಸಂಶೋಧನೆಗಳು ಬಹಿರಂಗಪಡಿಸಿವೆ ಎಂದು ಹೇಳಿದರು.

ನಮ್ಮ ಭಾರತೀಯ ಸಂಸ್ಕೃತಿ ಯಾವಾಗಲೂ ವಿಶ್ವ ಭ್ರಾತೃತ್ವ ಮತ್ತು ವಿಶ್ವ ಶಾಂತಿಯನ್ನು ಪ್ರೇರೇಪಿಸುತ್ತದೆ. ವಸುಧೈವ ಕುಟುಂಬಕಂ (ವಿಶ್ವವೇ ಕುಟುಂಬ, ಸರ್ವೇ ಭವಂತು ಸುಖಿನೋ, ಸರ್ವೇ ಸಂತು ನಿರಾಮಯಃ, ಬದುಕು ಮತ್ತು ಬದುಕಲು ಬಿಡು, ಅಹಿಂಸೆ ಸರ್ವೋಚ್ಚ, ಕೃಣ್ವಂತೋ ವಿಶ್ವಮಾರ್ಯಂ (ನಾವು ಇಡೀ ಜಗತ್ತನ್ನು ಶ್ರೇಷ್ಠಗೊಳಿಸುತ್ತೇವೆ) ಸಮಾನತೆ ಮತ್ತು ಸಾಮರಸ್ಯ ಸಾರುತ್ತದೆ ಎಂದು ತಿಳಿಸಿದರು.

ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ದೇವಾಲಯವಾದ ಸಂಸತ್ ಭವನವು ನಮ್ಮ ಸಂಸ್ಕೃತಿಯನ್ನು ನೆನಪಿಸುವ ಅನೇಕ ಸಂಸ್ಕೃತ ಉಲ್ಲೇಖಗಳನ್ನು ಹೊಂದಿದೆ. ಇಂದು ಪ್ರಪಂಚದ ಅನೇಕ ದೇಶಗಳು ಆಧ್ಯಾತ್ಮಿಕ ಮತ್ತು ಮಾನಸಿಕ ಯೋಗಕ್ಷೇಮಕ್ಕಾಗಿ ಭಾರತದ ಕಡೆಗೆ ನೋಡುತ್ತಿವೆ. ಭಾರತೀಯ ಪರಂಪರೆಯ ಜ್ಞಾನವನ್ನು ಹರಡಲು ಸಮಾಜದ ಎಲ್ಲಾ ವರ್ಗಗಳಿಗೆ ಗುಣಮಟ್ಟದ ಸಂಸ್ಕೃತ ಶಿಕ್ಷಣವನ್ನು ಒದಗಿಸುವುದು ಇಂದಿನ ಅಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಧರ್ಮಗ್ರಂಥಗಳ ಪ್ರಚಾರಕ್ಕಾಗಿ ಮತ್ತು ಸಂಸ್ಕೃತದ ಜ್ಞಾನ ಪರಂಪರೆಯ ಸರ್ವತೋಮುಖ ಪ್ರಚಾರಕ್ಕಾಗಿ ಡಿಜಿಟಲ್ ತಂತ್ರಜ್ಞಾನದೊಂದಿಗೆ ಸಂಪರ್ಕ ಸಾಧಿಸುವುದು ಇಂದಿನ ಅಗತ್ಯವಾಗಿದೆ. ಹೊಸ ರಾಷ್ಟ್ರೀಯ ಶಿಕ್ಷಣ ನೀತಿ 2020 ರಲ್ಲಿ, ಭಾರತೀಯ ಸಮಾಜದಲ್ಲಿ ಸಂಸ್ಕೃತ ಭಾಷೆಯ ಕೊಡುಗೆ ಮತ್ತು ಸಂಸ್ಕೃತ ಅಧ್ಯಯನದ ಪ್ರಾಮುಖ್ಯತೆಯನ್ನು ಸ್ಪಷ್ಟಪಡಿಸಲಾಗಿದೆ ಎಂದು ಮಾಹಿತಿ ನೀಡಿದರು.

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಸಂಸ್ಕೃತ ಸಂಶೋಧನೆಯಲ್ಲಿ ಗುಣಮಟ್ಟವನ್ನು ಹೆಚ್ಚಿಸಲು ನಾವೆಲ್ಲರೂ ಪ್ರಯತ್ನಿಸಬೇಕು ಎಂದ ಅವರು, ದೇವವಾಣಿ ಸಂಸ್ಕೃತ ಭಾಷೆ ಮತ್ತು ಅದರ ಸಂರಕ್ಷಣೆಗಾಗಿ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾನಿಲಯವು ಮಾಡುತ್ತಿರುವ ಪ್ರಯತ್ನಗಳು ಬಹಳ ಶ್ಲಾಘನೀಯ.

ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯವು ದೇಶದ ವಿವಿಧ ಭಾಗಗಳಲ್ಲಿ ಪ್ರತಿ ವರ್ಷ ಅಖಿಲ ಭಾರತ ಶಾಸ್ತ್ರ ಸ್ಪರ್ಧೆಯನ್ನು ಆಯೋಜಿಸುತ್ತಿದ್ದು, ಈ ವರ್ಷ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯವು ಈ ಶಾಸ್ತ್ರ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಈ 4 ದಿನಗಳ ಶಾಸ್ತ್ರ ಜ್ಞಾನ ಉತ್ಸವದಲ್ಲಿ ದೇಶದ ಸುಮಾರು 400 ವಿದ್ಯಾರ್ಥಿಗಳು ಭಾಗವಹಿಸುತ್ತಿದ್ದು, ಸಂಸ್ಕೃತ ಭಾಷೆಯ 26 ಉಪ ವಿಷಯಗಳ ಮೇಲೆ ಧರ್ಮಗ್ರಂಥಗಳ ಜ್ಞಾನವನ್ನು ಚರ್ಚಿಸುತ್ತಿರುವುದು ಪ್ರಶಂಸನೀಯ ಎಂದರು.

ಸಮಾರಂಭದಲ್ಲಿ ದೆಹಲಿಯ ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಪರಮೇಶ್ವರ ನಾರಾಯಣ ಶಾಸ್ತ್ರಿ, ಶ್ರೀನಿವಾಸ ವರ್ಖೇಡಿ, ಉಪಕುಲಪತಿ, ಕೇಂದ್ರೀಯ ಸಂಸ್ಕೃತ ವಿಶ್ವವಿದ್ಯಾಲಯ, ದೆಹಲಿ. ಪ್ರಾಧ್ಯಾಪಕ ಕೆ. ಇ. ದೇವನಾಥನ್ ಉಪಕುಲಪತಿಗಳು, ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾಲಯ ಬೆಂಗಳೂರು, ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X