ಮಾದಕ ವಸ್ತು ಮಾರಾಟಕ್ಕೆ ಯತ್ನ ಆರೋಪ; ಇಬ್ಬರ ಸೆರೆ
ಮಂಗಳೂರು : ನಗರದ ಗೋರಿಗುಡ್ಡೆಯ ಸ್ಮಶಾನದ ಬಳಿ ಮಾದಕ ವಸ್ತುವಾದ ಎಂಡಿಎಂಎ ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪದಲ್ಲಿ ಫರಂಗಿಪೇಟೆಯ ಮುಹಮ್ಮದ್ ಯೂಸುಫ್ ಸಬಿತ್ ಮತ್ತು ಸೈಯ್ಯದ್ ಅಫ್ರೀದ್ ಎಂಬವರನ್ನು ಪಾಂಡೇಶ್ವರ ಠಾಣಾ ಪೊಲೀಸರು ಶನಿವಾರ ಬಂಧಿಸಿದ್ದಾರೆ.
ಆರೋಪಿಗಳು ದ್ವಿಚಕ್ರ ವಾಹನದಲ್ಲಿ ಎಂಡಿಎಂಎ ಇಟ್ಟುಕೊಂಡು ಗ್ರಾಹಕರಿಗಾಗಿ ಕಾಯುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್ಸೈ ಶೀತಲ್ ಅಲಗೂರು ನೇತೃತ್ವದ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿತ್ತು.
Next Story





