ಸಿಎಂ ಬೊಮ್ಮಾಯಿಯಿಂದ ನಟ ಪುನೀತ್ ರಾಜ್‍ಕುಮಾರ್ ಕಂಚಿನ ಪ್ರತಿಮೆ ಲೋಕಾರ್ಪಣೆ

ಬೆಂಗಳೂರು, ಮಾ.27: ಬಿಬಿಎಂಪಿ ಆವರಣದಲ್ಲಿ ಡಾ.ರಾಜ್‍ಕುಮಾರ್ ಪುತ್ಥಳಿ ಪಕ್ಕದಲ್ಲೇ ನಟ ಪುನೀತ್ ರಾಜ್‍ಕುಮಾರ್ ಅವರ ಕಂಚಿನ ಪ್ರತಿಮೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರವಿವಾರ ಉದ್ಘಾಟಿಸಿದರು.
ಬಿಬಿಎಂಪಿ ನೌಕರರ ಕನ್ನಡ ಸಂಘದ ವತಿಯಿಂದ ಪಾಲಿಕೆ ಕೇಂದ್ರ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಪುನೀತ್‍ರಾಜ್‍ಕುಮಾರ್ ಪ್ರತಿಮೆ ಲೋಕಾರ್ಪಣೆ ಹಾಗೂ ಗಂಧದಗುಡಿ ಉದ್ಯಾನವನವನ್ನು ಸಿಎಂ ಬೊಮ್ಮಾಯಿ ಅವರು ಲೋಕಾರ್ಪಣೆಗೊಳಿಸಿದರು.
ಈ ಸಂದರ್ಭದಲ್ಲಿ ಶಾಸಕ ರಿಝ್ವಾನ್ ಅರ್ಷದ್, ನಟ ರಾಘವೇಂದ್ರ ರಾಜ್ ಕುಮಾರ್, ಪುನೀತ್ ಪತ್ನಿ ಅಶ್ವಿನಿ, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಉಪಸ್ಥಿತರಿದ್ದರು.
Next Story





