ಮೈಸೂರು: ಎಸೆಸೆಲ್ಸಿ ಪರೀಕ್ಷೆ ಬರೆಯುವ ವೇಳೆ ಹೃದಯಾಘಾತ; ವಿದ್ಯಾರ್ಥಿನಿ ಮೃತ್ಯು

ಮೃತ ವಿದ್ಯಾರ್ಥಿನಿ ಅನುಶ್ರೀ
ಮೈಸೂರು: ಎಸೆಸೆಲ್ಸಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳು ಹೃದಯಾಘತದಿಂದ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲೂಕಿನ ವಿದ್ಯೋದಯ ಪರೀಕ್ಷಾ ಕೇಂದ್ರದಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿಯನ್ನು ತಿ.ನರಸೀಪುರ ತಾಲೂಕಿನ ಅಕ್ಕೂರು ಗ್ರಾಮದ ನಿವಾಸಿ ಅನುಶ್ರೀ ಎಂದು ಗುರುತಿಸಲಾಗಿದೆ.
ಪರೀಕ್ಷೆ ಬರೆಯುವ ವೇಳೆ ಕುಸಿದು ಬಿದ್ದ ವಿದ್ಯಾರ್ಥಿನಿಯನ್ನ ಟಿ.ನರಸೀಪುರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಅನುಶ್ರೀ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ವಿದ್ಯಾರ್ಥಿನಿಯಯ ಮೃತ ದೇಹ ಸದ್ಯ ಟಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಯಲ್ಲಿಯಲ್ಲಿ ಇಡಲಾಗಿದೆ. ಈ ಸಂಬಂಧ ಟಿ ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Next Story