ಉಡುಪಿ ಜಿಲ್ಲೆಯಲ್ಲಿ 9 ಮಂದಿಗೆ ಕೊರೋನ ಸೋಂಕು
ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇಂದು ಸಹ ಯಾರೂ ಕೋವಿಡ್-19ಕ್ಕೆ ಸೋಂಕಿತರು ಪತ್ತೆಯಾಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಸಕ್ರಿಯ ಸೋಂಕಿತರಸಂಖ್ಯೆ 9 ಆಗಿದ್ದು, ಅವರೆಲ್ಲರೂ ಮನೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ.
ದಿನದಲ್ಲಿ ಒಟ್ಟು ೧೪೬ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಉಡುಪಿ ತಾಲೂಕಿನ ೧೨೩ ಮಂದಿ, ಕುಂದಾಪುರದ ೧೯ ಹಾಗೂ ಕಾರ್ಕಳ ತಾಲೂಕಿನ ನಾಲ್ವರಲ್ಲಿ ಯಾರೂ ಸೋಂಕಿತರು ಪತ್ತೆಯಾಗಿಲ್ಲ.
ದಿನದಲ್ಲಿ ಯಾರೂ ಸೋಂಕಿನಿಂದ ಚೇತರಿಸಿಕೊಂಡಿಲ್ಲ. ಜ.೧ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ ೧೮,೪೩೬ ಆದರೆ, ಚೇತರಿಸಿ ಕೊಂಡವರ ಸಂಖ್ಯೆ ೧೮೪೯೪ ಆಗಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
೨೭೩ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ೧೨ರಿಂದ ೧೪ವರ್ಷದೊಳಗಿನ ಒಟ್ಟು ೨೭೩ ಮಕ್ಕಳಿಗೆ ಕೋವಿಡ್ನ ಮೊದಲ ಡೋಸ್ ಲಸಿಕೆಯನ್ನು ನೀಡಲಾ ಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೧೭,೩೫೦ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.
ಅಲ್ಲದೇ ದಿನದಲ್ಲಿ ಒಟ್ಟು ೧೪೬೭ ಮಂದಿ ಇಂದು ಲಸಿಕೆಯನ್ನು ಪಡೆದು ಕೊಂಡಿದ್ದಾರೆ. ೬೦ ವರ್ಷ ಮೇಲಿನ ೬೧೪ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೬೪೩ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ಒಟ್ಟು ೩೦೬ ಮಂದಿ ಮೊದಲ ಡೋಸ್ ಹಾಗೂ ೫೧೮ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.