ಮಾ.29 : ರಾಜ್ಯ ಫೈಝೀಸ್ ನಿಂದ ಅನುಸ್ಮರಣೆ, ಪ್ರಾರ್ಥನಾ ಸಂಗಮ
ಮಂಗಳೂರು: ಕರ್ನಾಟಕ ರಾಜ್ಯ ಫೈಝೀಸ್ ಅಸೋಸಿಯೇಶನ್ ಇದರ ಆಶ್ರಯದಲ್ಲಿ ಪಟ್ಟಿಕ್ಕಾಡ್ ಜಾಮಿಅಃ ನೂರಿಯ್ಯಾ ಅರಬಿಕ್ ಕಾಲೇಜಿನ ಅಧ್ಯಕ್ಷರಾಗಿದ್ದ ಸಯ್ಯಿದುಲ್ ಉಮ್ಮ ಪಾಣಕ್ಕಾಡ್ ಹೈದರಲೀ ಶಿಹಾಬ್ ತಂಙಳ್ ಹಾಗೂ ರಾಜ್ಯ ಫೈಝೀಸ್ ಕೋಶಾಧಿಕಾರಿ ಯಾಗಿದ್ದ ಮರ್ಹೂಂ ಸುಲೈಮಾನ್ ಫೈಝಿ ಕನ್ಯಾನ ಇವರ ಅನುಸ್ಮರಣಾ ಸಂಗಮ ಹಾಗೂ ಪ್ರಾರ್ಥನಾ ಮಜ್ಲಿಸ್ ಮಂಗಳೂರಿನ ಝೀನತ್ ಭಕ್ಷ್ ಬಂದರ್ ಕೇಂದ್ರ ಜುಮಾ ಮಸೀದಿಯಲ್ಲಿ ಮಾ.29ರಂದು ಬೆಳಿಗ್ಗೆ 9 ಗಂಟೆಯಿಂದ ವಿವಿಧ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.
ರಾಜ್ಯ ಫೈಝೀಸ್ ಅಧ್ಯಕ್ಷ ಕೆ.ಎಂ. ಉಸ್ಮಾನುಲ್ ಫೈಝಿ ತೋಡಾರು ಅಧ್ಯಕ್ಷತೆ ವಹಿಸಲಿದ್ದು ಸಮಸ್ತ ಕೇಂದ್ರ ಮುಶಾವರ ಅಧ್ಯಕ್ಷ ಸಯ್ಯಿದುಲ್ ಉಲಮಾ ಜಿಫ್ರೀ ಮುತ್ತುಕೋಯ ತಂಙಳ್ ಉದ್ಘಾಟಿಸಲಿದ್ದಾರೆ, ರಹ್ಮತುಲ್ಲಾ ಖಾಸಿಮಿ ಮುತ್ತೇಡಂ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ.
ದ.ಕ. ಜಿಲ್ಲಾ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್, ಸಮಸ್ತ ಕರ್ನಾಟಕ ಮುಶಾವರ ಅಧ್ಯಕ್ಷ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ, ಕೇಂದ್ರ ಮುಶಾವರ ಸದಸ್ಯ ಶೈಖುನಾ ತೊಟ್ಟಿ ಮಾಹಿನ್ ಮುಸ್ಲಿಯಾರ್, ಶೈಖುನಾ ಎಂ. ಎಂ. ಅಬ್ದುಲ್ಲಾ ಮುಸ್ಲಿಯಾರ್ ಕೊಡಗು, ಶೈಖುನಾ ಬಂಬ್ರಾಣ ಅಬ್ದುಲ್ ಖಾದರ್ ಅಲ್ ಖಾಸಿಮಿ, ಮಂಗಳೂರು ಕೇಂದ್ರ ಜುಮಾ ಮಸೀದಿ ಖತೀಬ್ ಅಬುಲ್ ಅಕ್ರಂ ಮುಹಮ್ಮದ್ ಮುಸ್ಲಿಯಾರ್ ಅಲ್ಲದೇ ಹಲವಾರು ಉಲಮಾಗಳು ಮುಖಂಡರು ಭಾಗವಹಿಸಲಿದ್ದಾರೆ ಎಂದು ರಾಜ್ಯ ಫೈಝೀಸ್ ಪ್ರಧಾನ ಕಾರ್ಯದರ್ಶಿ ಅಶ್ರಫ್ ಫೈಝಿ ಕೊಡಗು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.