Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎ.2 : ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ...

ಎ.2 : ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸವಣೂರು ಸೀತಾರಾಮ ರೈಗೆ ನಾಗರಿಕ ಸನ್ಮಾನ

ವಾರ್ತಾಭಾರತಿವಾರ್ತಾಭಾರತಿ29 March 2022 5:31 PM IST
share

ಪುತ್ತೂರು: ರಾಜ್ಯಮಟ್ಟದ ಸಹಕಾರ ರತ್ನ ಪ್ರಶಸ್ತಿ ಪಡೆದಿರುವ, ಸವಣೂರು ವಿದ್ಯಾರಶ್ಮಿ ವಿದ್ಯಾಸಂಸ್ಥೆಗಳ ಸಂಚಾಲಕರೂ, ಆದರ್ಶ ಸಹಕಾರಿ ಸಂಘದ ಅಧ್ಯಕ್ಷರೂ, ಜಿಲ್ಲೆಯ ಹಿರಿಯ ಸಹಕಾರಿ ಧುರೀಣರೂ ಆಗಿರುವ ಸವಣೂರು ಕೆ. ಸೀತಾರಾಮ ರೈ ಅವರಿಗೆ ನಾಗರಿಕ ಸಮ್ಮಾನ ಸಮಾರಂಭ ಎ 2ರಂದು ಪುತ್ತೂರು ಬಂಟರ ಭವನದಲ್ಲಿ ನಡೆಯಲಿದೆ ಎಂದು ಸಮ್ಮಾನ ಸಮಿತಿಯ ಅಧ್ಯಕ್ಷ ಶಶಿಕುಮಾರ್ ರೈ ಬಾಲ್ಯೊಟ್ಟು ಹೇಳಿದರು.

ಮಂಗಳವಾರ ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೊಂದು ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಸಹಕಾರಿ ಕ್ಷೇತ್ರವೂ ಸೇರಿದಂತೆ ಸಮಾಜದ ನಾನಾ ಕ್ಷೇತ್ರಗಳಿಗೆ ಅಪೂರ್ವ ಕೊಡುಗೆ ನೀಡಿರುವ ಸೀತಾರಾಮ ರೈ ಅವರ ಸಮ್ಮಾನ ಕಾರ್ಯಕ್ರಮಕ್ಕೆ "ಸೀತಾಭಿಮಾನ' ಎಂಬ ಹೆಸರಿಡಲಾಗಿದೆ. ಸಮಾಜದ ಎಲ್ಲ ವರ್ಗದ ಜನರ ಸಹಭಾಗಿತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಇದುವರೆಗೆ ನಡೆದ ಎಲ್ಲ ನಾಗರಿಕ ಸಮ್ಮಾನ ಕಾರ್ಯಕ್ರಮಗಳಿಗಿಂತಲೂ ವಿಭಿನ್ನವಾಗಿ ಮತ್ತು ಅರ್ಥಪೂರ್ಣವಾಗಿ ಈ ಕಾರ್ಯಕ್ರಮ ನಡೆಯಲಿದೆ.

ಅಂದು ಪೂರ್ವಾಹ್ನ 10 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಸಂಸದ ನಳಿನ್ ಕುಮಾರ್ ಕಟೀಲ್ ಉದ್ಘಾಟಿಸಲಿದ್ದಾರೆ. ಎಸ್‍ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕೇಂದ್ರದ ಮಾಜಿ ಸಚಿವ ಡಿ.ವಿ. ಸದಾನಂದ ಗೌಡ ಅವರು ನಾಗರಿಕ ಸಮ್ಮಾನ ನಡೆಸಿಕೊಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಎಸ್. ಅಂಗಾರ, ಶಾಸಕ ಸಂಜೀವ ಮಠಂದೂರು, ಪುತ್ತೂರು ನಗರಸಭಾ ಅಧ್ಯಕ್ಷ ಜೀವಂಧರ ಜೈನ್, ಮಾಜಿ ಸಚಿವ ಬಿ. ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಭಾಗವಹಿಸಲಿದ್ದಾರೆ. ನಿವೃತ್ತ ಪ್ರಿನ್ಸಿಪಾಲ್ ಝೇವಿಯರ್ ಡಿಸೋಜ ಅಭಿನಂದನಾ ನುಡಿಗಳನ್ನಾಡಲಿದ್ದಾರೆ ಎಂದವರು ವಿವರಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮ್ಮಾನ ಸಮಿತಿಯ ಕಾರ್ಯದರ್ಶಿ ಸೀತಾರಾಮ ಕೇವಳ, ಸದಸ್ಯರಾದ ವಸಂತ ಜಾಲಾಡಿ, ಸೀತಾರಾಮ ರೈ ಕೆದಂಬಾಡಿಗುತ್ತು, ರಮೇಶ್ ರೈ ಡಿಂಬ್ರಿ ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X