ವಿವಿ ವಿದ್ಯಾರ್ಥಿ ಪರಿಷತ್ ಉದ್ಘಾಟನೆಗೆ ಕಲ್ಲಡ್ಕ ಪ್ರಭಾಕರ ಭಟ್ ಗೆ ಆಹ್ವಾನ; ಎಸ್.ಎಫ್.ಐ ವಿರೋಧ
ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಕ್ಷೇಮಪಾಲನಾ ನಿರ್ದೇಶನಾಲಯ 2021-22 ರ ಸಾಲಿನ ಸ್ನಾತಕೋತ್ತರ ವಿದ್ಯಾರ್ಥಿ ಪರಿಷತ್ತಿನ ಉದ್ಘಾಟನಾ ಕಾರ್ಯಕ್ರಮಕ್ಕೆ ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ರನ್ನು ಆಹ್ವಾನಿಸಿರುವುದನ್ನು ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್.ಎಫ್.ಐ) ವಿರೋಧ ವ್ಯಕ್ತಪಡಿಸಿದೆ.
ಕೋಮು ಮತಾಂಧತೆಗೆ ವಿದ್ಯಾರ್ಥಿಗಳು ಬಲಿಯಾಗದಂತೆ ಎಚ್ಚರ ವಹಿಸುವ ಜವಾಬ್ದಾರಿ ಜಿಲ್ಲಾಡಳಿತಕ್ಕೆ ಇದೆ. ಧರ್ಮಾಧಾರಿತ ತಾರತಮ್ಯ, ಜನಾಂಗ ದ್ವೇಷಕ್ಕೆ ಕುಖ್ಯಾತರಾಗಿರುವವರನ್ನು ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮಕ್ಕೆ ಭಾಗವಹಿಸದಂತೆ ಜಿಲ್ಲಾಡಳಿತ ಕ್ರಮಕೈಗೊಳ್ಳಲು ಒತ್ತಾಯಿಸಿದೆ.
ದ.ಕ. ಜಿಲ್ಲಾಡಳಿತ ಜಿಲ್ಲೆಯ ಕಾನೂನು ಸುವ್ಯವಸ್ಥೆ ರಕ್ಷಣೆಗಾಗಿ, ಕಾಲೇಜು ಕ್ಯಾಂಪಸ್ ಗಳಲ್ಲಿ ಶಾಂತಿ ಕದಡದಂತೆ ಮುಂಜಾಗ್ರತೆಯ ಭಾಗವಾಗಿ ಈ ಕಾರ್ಯಕ್ರಮದಲ್ಲಿ ಯಾವುದೇ ಕಾರಣಕ್ಕೂ ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಲು ಅವಕಾಶ ನೀಡದಂತೆ ಕ್ರಮಕೈಗೊಳ್ಳಲು ಒತ್ತಾಯಿಸುತ್ತದೆ ಎಂದು ಎಸ್.ಎಫ್.ಐ ನ ಜಿಲ್ಲಾ ಮುಖಂಡರಾದ ವಿನಿತ್ ದೇವಾಡಿಗ, ವಿನುಶ ರಮಣ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.





