ಶಕ್ತಿನಗರ: ಕಾರಿನಲ್ಲಿ ಬೆಂಕಿ ಅನಾಹುತ

ಮಂಗಳೂರು : ನಗರದ ಶಕ್ತಿನಗರ ಬಳಿ ಪಾರ್ಕ್ ಮಾಡಲಾಗಿದ್ದ ಕಾರಿನಲ್ಲಿ ಬೆಂಕಿ ಅನಾಹುತ ಸಂಭವಿಸಿದ ಘಟನೆ ಮಂಗಳವಾರ ರಾತ್ರಿ ನಡೆದಿದೆ.
ಮಹಿಳೆಯೊಬ್ಬರು ಶಕ್ತಿನಗರದಲ್ಲಿ ಕಾರು ನಿಲ್ಲಿಸಿ ತನ್ನ ಮೊಬೈಲನ್ನು ಕಾರಿನೊಳಗೆ ಚಾರ್ಜ್‌ಗಿಟ್ಟು ವಿಹಾರಕ್ಕೆ ತೆರಳಿದ್ದರು. ಮರಳಿ ಬರುವಷ್ಟರಲ್ಲಿ ಜಾರ್ಜ್ ಇಟ್ಟ ಸ್ಥಳದಲ್ಲಿ ಬೆಂಕಿ ಕಾಣಿಸಿತು. ತಕ್ಷಣ ಅವರು ಸ್ಥಳೀಯರಿಗೆ ತಿಳಿಸಿದ್ದು, ಮಾಹಿತಿ ಪಡೆದ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ವರ್ಗವು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಆದರೆ ಕಾರು ಸುಟ್ಟು ಹೋಗಿದೆ ಎಂದು ತಿಳಿದು ಬಂದಿದೆ.
Next Story