Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳು,...

ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳು, ರೈತ ಈಗ ಶಕ್ತಿವಂತನಾಗುತ್ತಿದ್ದಾನೆ: ಬಿ.ಸಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ29 March 2022 11:49 PM IST
share
ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳು, ರೈತ ಈಗ ಶಕ್ತಿವಂತನಾಗುತ್ತಿದ್ದಾನೆ: ಬಿ.ಸಿ.ಪಾಟೀಲ್

ಬೆಂಗಳೂರು, ಮಾ. 29: ‘ರೈತರ ಆದಾಯ ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರಕಾರ ಕೃಷಿಕರ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ರೂಪಿಸಿದ್ದು, ಇದರ ಪರಿಣಾಮ ರೈತರ ಆತ್ಮಹತ್ಯೆ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿವೆ. ಹೊಸ ಹೊಸ ಕಾರ್ಯಕ್ರಮಗಳ ಪರಿಣಾಮ ರೈತ ಶಕ್ತಿವಂತನಾಗುತ್ತಿದ್ದಾನೆ' ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸಭೆಯಲ್ಲಿ ಇಲಾಖೆ ಬೇಡಿಕೆಗಳ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ‘ವಿದ್ಯಾವಂತರೂ ಕೃಷಿಯತ್ತ ಆಕರ್ಷಿತರಾಗುತ್ತಿದ್ದು, ರೈತರ ಮಕ್ಕಳ ಉನ್ನತ ವಿದ್ಯಾಭ್ಯಾಸಕ್ಕೆ ಸರಕಾರ ವಿದ್ಯಾರ್ಥಿ ವೇತನವನ್ನು ನೀಡುತ್ತಿದ್ದು, ಕೃಷಿ ವಿವಿಗಳಲ್ಲಿ ರೈತರ ಮಕ್ಕಳಿಗೆ ಶೇ.50ರಷ್ಟು ಮೀಸಲಾತಿ ನೀಡಿದ್ದೇವೆ. ಪರಿಣಾಮ 183 ಸೀಟುಗಳು ಲಭ್ಯವಾಗಿವೆ. 7 ವಿವಿಗಳಲ್ಲಿ 700 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ' ಎಂದು ಹೇಳಿದರು.

‘ರೈತರ ಮಕ್ಕಳಿಗೆ ಮೂರು ವರ್ಷಗಳ ಕಾಲ ತರಬೇತಿ ನೀಡುತ್ತಿದ್ದು, ಖಾಸಗಿ ಕಂಪೆನಿ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಖಾಸಗಿ ಕಂಪೆನಿಯವರು ಶೇ.85ರಷ್ಟು ಅಂದರೆ 555 ಕೋಟಿ ರೂ.ಹಾಗೂ ಶೇ.15ರಷ್ಟು ಸರಕಾರ ಬಂಡವಾಳ ಹೂಡಿಕೆ ಮಾಡಲಿದೆ. ವಿಶ್ವವಿದ್ಯಾಲಯಗಳಲ್ಲಿ ಅಗತ್ಯವಿರುವ ತರಬೇತಿಯನ್ನು ರೈತರ ಮಕ್ಕಳಿಗೆ ನೀಡಲಾಗುವುದು ಎಂದು ಬಿ.ಸಿ.ಪಾಟೀಲ್ ತಿಳಿಸಿದರು.

ಆಹಾರ ಸಂಸ್ಕರಣೆಗೆ ಒತ್ತು: ‘ರಾಜ್ಯದ 11 ಕಡೆ ಆಹಾರ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸುತ್ತಿದ್ದು, ರೈತರು ತಾವು ಬೆಳೆದ ಬೆಳೆಗೆ ಸಕಾಲದಲ್ಲಿ ಬೆಲೆ ಸಿಗದಿದ್ದಾಗ ತಮ್ಮ ಆಹಾರ ಧಾನ್ಯಗಳನ್ನು ಸಂಗ್ರಹಿಸಿಟ್ಟುಕೊಳ್ಳಬಹುದು. ಇದರಿಂದ ಆಹಾರ ಪದಾರ್ಥಗಳು ಕೆಡುವುದಿಲ್ಲ. ಅವರು ತಮಗೆ ಬೇಕಾದ ಸಂದರ್ಭದಲ್ಲಿ ಮಾರಾಟ ಮಾಡಿಕೊಳ್ಳಬಹುದು. ‘ಸಿರಿಧಾನ್ಯ' ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡಲಾಗುತ್ತಿದೆ. ಪ್ರಸಕ್ತ ವರ್ಷ ರಾಜ್ಯದ ನಾಲ್ಕು ಭಾಗಗಳಲ್ಲಿ ಸಿರಿಧಾನ್ಯಗಳ ಮೇಳ ನಡೆಸುವ ಮೂಲಕ ಸಿರಿಧಾನ್ಯ ಬೆಳೆಯುವ ರೈತರಿಗೆ ಪ್ರೋತ್ಸಾಹ ನೀಡಲಾಗುವುದು. ಇನ್ನು ಮುಂದೆ ತಿಂಗಳಿಗೆ ವಾರಕ್ಕೆ ಒಂದು ದಿನ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟಕ್ಕೆ ಸಿರಿಧಾನ್ಯದ ಆಹಾರ ನೀಡಲು 10 ಕೋಟಿ ರೂ.ಅನುದಾನ ಮೀಸಲಿರಿಸಿದ್ದೇವೆ ಎಂದರು.

ರಸಗೊಬ್ಬರ ಕೊರತೆ ಇಲ್ಲ

‘ರಾಜ್ಯದಲ್ಲಿ ರಸಗೊಬ್ಬರ ಕೊರತೆ ಇಲ್ಲ. ಆದರೆ, ಕೆಲ ಕಾಳಸಂತೆಕೋರರು ಕೃತಕ ಅಭಾವ ಸೃಷ್ಟಿಸಿ ಲಾಭ ಮಾಡಿಕೊಳ್ಳುತ್ತಿದ್ದಾರೆ. ಚನ್ನಪಟ್ಟಣದಲ್ಲಿನ ಘಟನೆ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕಾನೂನು ರೀತಿಯಲ್ಲಿ ಕೈಗೊಳ್ಳಲಾಗುವುದು. ಕಳಪೆ ಬಿತ್ತನೆ ಬೀಜ ಮಾರಾಟ, ರಸಗೊಬ್ಬರ ಕೃತಕ ಅಭಾವ ಸೃಷ್ಟಿ ಸಂಬಂಧಿಸಿದಂತೆ ಒಟ್ಟು 153 ಅಂಗಡಿಗಳ ಪರವಾನಿಗೆ ರದ್ದು ಮಾಡಿದ್ದು, 203 ಕೇಸು ದಾಖಲಿಸಿ, 24 ಕೋಟಿ ರೂ.ಗಳಷ್ಟು ಮೊತ್ತದ ಆಸ್ತಿ ಜಪ್ತ್ತಿ ಮಾಡಲಾಗಿದೆ'

-ಬಿ.ಸಿ.ಪಾಟೀಲ್ ಕೃಷಿ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X