Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕಾಲಮಿತಿಯಲ್ಲಿ ಯೋಜನೆಗಳ ಅನುಮೋದನೆ:...

ಕಾಲಮಿತಿಯಲ್ಲಿ ಯೋಜನೆಗಳ ಅನುಮೋದನೆ: ಉದ್ಯಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ವಾರ್ತಾಭಾರತಿವಾರ್ತಾಭಾರತಿ30 March 2022 10:26 AM IST
share
ಕಾಲಮಿತಿಯಲ್ಲಿ ಯೋಜನೆಗಳ ಅನುಮೋದನೆ: ಉದ್ಯಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರವಸೆ

ಬೆಂಗಳೂರು : ಹೂಡಿಕೆದಾರರ ಯೋಜನೆಗಳಿಗೆ ತ್ವರಿತ ಅನುಮೋದನೆ ನೀಡಿ, ನಿಗದಿತ ಕಾಲಮಿತಿಯಲ್ಲಿ ಅನುಮೋದನೆ ನೀಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಬೆಂಗಳೂರಿನಲ್ಲಿ ಆಯೋಜಿಸಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ʼInvest Karnataka 2022ʼ ಅನಾವರಣ ಮಾಡಿ ಮಾತನಾಡಿದರು.

ಬಂಡವಾಳವನ್ನು ಸರಿಯಾದ ಸಮಯದಲ್ಲಿ ಹೂಡಿಕೆ ಮಾಡಿದಾಗ ಯಶಸ್ಸು ಕಾಣಲು ಸಾಧ್ಯ.  ಕರ್ನಾಟಕ ರಾಜ್ಯ ಅದರಲ್ಲಿಯೂ ಬೆಂಗಳೂರಿನಲ್ಲಿ ಉದ್ಯಮ ಸ್ನೇಹಿ ಪರಿಸರ, ಕೌಶಲ್ಯಭರಿತ ಮಾನವ ಸಂಪನ್ಮೂಲ, ಆಧುನಿಕ ತಂತ್ರಜ್ಞಾನ  ಹಾಗೂ ಆರ್ಥಿಕತೆಯ ಕೇಂದ್ರವಾಗಿರುವ ಬಂಡವಾಳ ಹೂಡಿಕೆಗೆ ಪ್ರಶಸ್ತವಾದ ಸಮಯ ಇದಾಗಿದೆ ಎಂದು ತಿಳಿಸಿದರು.

ಪ್ರಮುಖ ಬಂಡವಾಳ ಹೂಡಿಕೆದಾರರನ್ನು ಆಕರ್ಷಿಸುವ ಜೊತೆಗೆ ಪ್ರಾದೇಶಿಕ ಬಂಡವಾಳ ಹೂಡಿಕೆಗೆ ಹೆಚ್ಚಿನ ಒತ್ತು ನೀಡಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಮುನ್ನವೇ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ಕೋವಿಡ್ ನಂತರ ಆರ್ಥಿಕತೆಯಲ್ಲಿ ಚೇತರಿಕೆ ಕಂಡಿರುವ ಕರ್ನಾಟಕದಲ್ಲಿ ವಿಶ್ವಾಸಾರ್ಹವಾದ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಎಲ್ಲ ಸಹಾಯ ಸಹಕಾರವನ್ನು ನೀಡುತ್ತದೆ ಎಂದು ತಿಳಿಸಿದರು.

ರಾಜ್ಯಕ್ಕೆ ಹೈಟೆಕ್ ಉದ್ಯಮ, ಸೆಮಿ ಕಂಡಕ್ಟರ್, ನವೀಕರಿಸಬಹುದಾದ ಇಂಧನ, ವಿದ್ಯುತ್ ವಾಹನ, ಐಟಿ , ಬಿಟಿ, ಸಣ್ಣ ಕೈಗಾರಿಕೆ, ಗುಡಿ ಕೈಗಾರಿಕೆ ಹೀಗೆ ವೈವಿಧ್ಯಮಯ ವಲಯಗಳಲ್ಲಿ ಹೂಡಿಕೆ ಹರಿದು ಬರಬೇಕು. ಇದರಿಂದ ರಾಜ್ಯದ ಆರ್ಥಿಕತೆ ಸುಭದ್ರವಾಗುವುದು. ಆರ್ಥಿಕತೆ ಎಂದರೆ ಕೇವಲ ಹಣವಲ್ಲ, ಜನರು, ಜನರ ಆದಾಯ ಉತ್ಪನ್ನ ಚಟುವಟಿಕೆಗಳು ಆರ್ಥಿಕ ಅಭಿವೃದ್ಧಿಗೆ ಕಾರಣ. ಆದ್ದರಿಂದ ಜಾಗತಿಕ ಹೂಡಿಕೆದಾರರ ಸಮಾವೇಶ ಇಂತಹ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಿ ವಂತಾಗಬೇಕು ಎಂದು ತಿಳಿಸಿದರು.

ದೇಶದಲ್ಲಿ ಅತಿ ಹೆಚ್ಚು ಸ್ಟಾರ್ಟ್ ಅಪ್ ಗಳು, ಯುನಿಕಾರ್ನ್ ಕಂಪೆನಿಗಳನ್ನು ಹೊಂದಿರುವ ನಮ್ಮ ರಾಜ್ಯದಲ್ಲಿ ಯುವ, ಸೃಜನ ಶೀಲ ಮನಸ್ಸುಗಳು, ಕುಶಲ ಕೆಲಸಗಾರರು ಹಾಗೂ ಸಮೃದ್ಧ ನೈಸರ್ಗಿಕ ಸಂಪನ್ಮೂಲಗಳ ನಮ್ಮ ಶಕ್ತಿ. ಇದಕ್ಕೆ ಪೂರಕವಾಗಿ ಹೂಡಿಕೆದಾರರಿಗೆ ಅಗತ್ಯ ಸೌಲಭ್ಯ ಒದಗಿಸಲು ಲ್ಯಾಂಡ್ ಬ್ಯಾಂಕ್ ಸೃಜಿಸಲಾಗುತ್ತಿದೆ, ಕೈಗಾರಿಕಾ ನೀತಿ, ಈಸ್ ಆಫ್ ಡೂಯಿಂಗ್ ಬಿಸಿನೆಸ್ ಅಡಿ ಹಲವು ಸವಲತ್ತು ಒದಗಿಸಲಾಗುತ್ತಿದೆ ಎಂದು ತಿಳಿಸಿದರು.

ಭವಿಷ್ಯದ ಇಂಟಗ್ರಟೆಡ್ ಟೌನ್ಶಿಪ್ ಗಳು, ಕೈಗಾರಿಕಾ ಟೌನ್ಶಿಪ್ ಗಳ ನಿರ್ಮಾಣ ಹಾಗೂ ಸಂಶೋಧನೆ ಮತ್ತು ಅಭಿವೃದ್ಧಿ ವಲಯಕ್ಕೆ ಉತ್ತೇಜನ ಮೊದಲಾದ ಹಲವು ವಿನೂತನ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಸಚಿವರಾದ ಎಂಟಿಬಿ ನಾಗರಾಜ್ ಹಾಗೂ ಮುರುಗೇಶ್ ನಿರಾಣಿ ಅವರು ಉದ್ಯಮಿಗಳಾಗಿದ್ದು, ಯುವೋದ್ಯಮಿಗಳಿಗೆ ಪ್ರೇರಣೆಯಾಗಿದ್ದಾರೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X