ಸ್ವಚ್ಛತಾ ಕಾರ್ಮಿಕರು ಕೋವಿಡ್ ಚಾಂಪಿಯನ್ ಗಳು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು : ಕೋವಿಡ್ ಸಂದರ್ಭದಲ್ಲಿ ಮಂಗಳೂರು ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದ ಪೌರ ಕಾರ್ಮಿಕರು ಕೋವಿಡ್ ಸಂದರ್ಭದ ಚಾಂಪಿಯನ್ ಗಳಾಗಿ ಕಾರ್ಯ ನಿರ್ವಹಿಸಿದ್ದಾರೆ ಎಂದು ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ತಿಳಿಸಿದ್ದಾರೆ.
ಅವರು ಇಂದು ನಗರದ ಪುರಭವನದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಮತ್ತು ಯೆನೆಪೊಯ ಸಮುದಾಯ ಅರೋಗ್ಯ ವಿಭಾಗ, ಯೆನೆಪೊಯ ವೈದ್ಯಕೀಯ ಕಾಲೇಜು ದೇರಳಕಟ್ಟೆ ಜಂಟಿ ಆಶ್ರಯದಲ್ಲಿ ಮಂಗಳೂರು ಮಹಾನಗರ ಪಾಲಿಕೆ ಪೌರ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ನಗರದ ಸ್ವಚ್ಛತೆಯಲ್ಲಿ ತೊಡಗಿಕೊಂಡಿರುವ ಸ್ವಚ್ಛತಾ ಪೌರ ಕಾರ್ಮಿಕರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಆರೋಗ್ಯ ತಪಾಸಣಾ ಕಾರ್ಯ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ದ.ಕ.ಜಿಲ್ಲಾ ಧಿಕಾರಿ ತಿಳಿಸಿದ್ದಾರೆ.
ಮನಪಾ ಆಯುಕ್ತ ಅಕ್ಷಯ್ ಶ್ರೀಧರ್ ಮತ್ತು ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ ಚಾಲನೆ ನೀಡಿ ಶುಭ ಹಾರೈಸಿದರು.
ಮಾನಪಾ ಮಾಜಿ ಮೇಯರ್ ದಿವಾಕರ್, ಮನಪಾ ಆರೋಗ್ಯ ಅಧಿಕಾರಿ ಡಾ.ಮಂಜಯ್ಯ ಶೆಟ್ಟಿ, ಕೋವಿಡ್ ವಿಭಾಗದ ನೋಡಲ್ ಅಧಿಕಾರಿ ಡಾ.ಅಣ್ಣಯ್ಯ ಕುಲಾಲ್, ಯೆನೆಪೊಯ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ.ಅಭಯ ನೀರ್ಗುಡೆ, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ. ಪೂನಂ, ಡಾ. ಶುಭಾಂಕರ್, ಸಾರ್ವಜನಿಕ ಸಂಪರ್ಕ ಪ್ರತಿನಿಧಿ ಭಾಸ್ಕರ ಅರಸ್ , ಮನಪಾ ಆರೋಗ್ಯ ನಿರೀಕ್ಷಕ ಶಿವಲಿಂಗಂ ಮೊದಲಾದವರು ಉಪಸ್ಥಿತರಿದ್ದರು.
ಅಬ್ದುಲ್ ರಝಾಕ್ ಕಾರ್ಯಕ್ರಮ ನಿರೂಪಿಸಿದರು.