2021ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಯಕ್ಷಸಿರಿ, ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭ
ಕಾರ್ಕಳ: ಕರ್ನಾಟಕ ಯಕ್ಷಗಾನ ಅಕಾಡೆಮಿಯು “2021ನೇ ಸಾಲಿನ ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ, ಗೌರವ ಪ್ರಶಸ್ತಿ, ಯಕ್ಷಸಿರಿ ಪ್ರಶಸ್ತಿ ಹಾಗೂ 2020ನೇ ಸಾಲಿನ ಪುಸ್ತಕ ಬಹುಮಾನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಎ.1 ರಂದು ಮಧ್ಯಾಹ್ನ 3 ಗಂಟೆಗೆ ಶ್ರೀ ಭುವನೇಂದ್ರ ಕಾಲೇಜ್, ಕಾರ್ಕಳ ಇಲ್ಲಿ ಹಮ್ಮಿಕೊಂಡಿದೆ.
ಕಾರ್ಯಕ್ರಮದಲ್ಲಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಂಡಿತಾಚಾರ್ಯವರ್ಯ ಸ್ವಾಮೀಜಿ, ಸಚಿವರಾದ ಅಂಗಾರ, ಸುನೀಲ್ ಕುಮಾರ್ ಉಪಸ್ಥಿತರಿರುವರು.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಕಿರುಪರಿಚಯ ಪುಸ್ತಕ ಬಿಡುಗಡೆ ಮಾಡುವರು, ಕರ್ನಾಟಕ ಯಕ್ಷಗಾನ ಅಕಾಡಮಿ ಅಧ್ಯಕ್ಷ ಜಿ.ಎಲ್. ಹೆಗಡೆ ಕುಮಟಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸುವರು. ಮುಖ್ಯ ಅತಿಥಿಗಳಾಗಿ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಕೆ.ಜಯಪ್ರಕಾಶ ಹೆಗ್ಡೆ, ಸಂಸದ ಬಿ.ವೈ. ರಾಘವೇಂದ್ರ, ಮಟ್ಟಾರು ರತ್ನಾಕರ ಹೆಗ್ಡೆ, ಹಾಲಾಡಿ ಶ್ರೀನಿವಾಸ ಶೆಟ್ಟಿ, ಉಡುಪಿ ಶಾಸಕ ರಘಪತಿ ಭಟ್, ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಆಯನೂರು ಮಂಜುನಾಥ, ಎಸ್.ಎಲ್, ಭೋಜೇಗೌಡ, ಡಾ.ತೇಜಸ್ವಿನಿ ಗೌಡ, ಡಾ.ವಿ.ಮಂಜುನಾಥ ಭಂಡಾರಿ, ಕಾರ್ಕಳ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ಭಾಗವಹಿಸುವರು.
ಅತಿಥಿಗಳಾಗಿ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್.ಎಂ. ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ನವೀನ್ ಭಟ್ ವೈ, ಉಡುಪಿ ಜಿಲ್ಲಾ ಪೋಲಿಸ್ ವರಿಷ್ಟಾಧಿಕಾರಿ ಎನ್.ವಿಷ್ಣುವರ್ಧನ್,ಪ್ರಕಾಶ್.ಜಿ.ಟಿ.ನಿಟ್ಟಾಲಿ, ಮಾಹೆ ಮಣಿಪಾಲ್ ಸಹ ಕುಲಾಧಿಪತಿ ಡಾ.ಎಸ್..ಎಚ್ ಬಲ್ಲಾಳ್, ಸಿ.ಎ. ಶಿವಾನಂದ ಪೈ, ಪ್ರಾಂಶುಪಾಲರಾದ ಡಾ.ಮಂಜುನಾಥ್.ಎ ಕೋಟ್ಯಾನ್ ಕಾರ್ಕಳ, ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಎಸ್, ತಾಲ್ಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಎಂ.ಎನ್.ಗುರುದತ್, ಕಾರ್ಕಳ ಯಕ್ಷರಂಗಾಯಣ ಕಾರ್ಕಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಭಾಗವಹಿಸುವರು.
ವಿಶೇಷ ಆಕರ್ಷಣೆಯಾಗಿ ಹೆಸರಾಂತ ಕಲಾವಿದರಿಂದ ಮಧ್ಯಾಹ್ನ ತಾಳಮದ್ದಳೆ-‘ಶಲ್ಯ ಸಾರಥ್ಯ’ ದ ಹಿಮ್ಮೇಳನದಲ್ಲಿ ಶಿವಶಂಕರ ಬಲಿಪ, ಚಂದ್ರಶೇಖರ ಭಟ್ ಕೊಂಕಣಾಜೆ, ರವಿರಾಜ ಜೈನ್ ಕಾರ್ಕಳ, ಮುಮ್ಮೇಳದಲ್ಲಿ ಡಾ.ಎಂ.ಪ್ರಭಾಕರ ಜೋಶಿ, ಪವನ ಕಿರಣ್ಕೆರೆ, ಶ್ರೀರಮಣ ಆಚಾರ್ಯ, ಕಾರ್ಕಳ, ಇವರುಗಳು ನಡೆಸುವರು.
ಪ್ರಶಸ್ತಿ ಪ್ರದಾನದ ನಂತರ ಸಂಜೆ ಯಕ್ಷಗಾನ-‘ಪಾರಿಜಾತ ನರಕಾಸುರ’ ಶ್ರೀ ಯಕ್ಷದೇವ ಮಿತ್ರ ಕಲಾಮಂಡಳಿ ಬೆಳುವಾಯಿ ಸಂಯೋಜನೆಯಲ್ಲಿ ಯಕ್ಷಗಾನ ಪ್ರದರ್ಶನ ಹಿಮ್ಮೇಳದಲ್ಲಿ ಗಿರೀಶ್ ರೈ ಕಕ್ಯಪದವು, ಪದ್ಮನಾಭ ಉಪಾಧ್ಯ, ಉಜಿರೆ, ಎಂ.ದೇವಾನಂದ್ ಭಟ್ ಬೆಳ್ವಾಯಿ, ರವಿಪ್ರಸಾದ ಕೆ ಶೆಟ್ಟಿ, ಮೂಡಬಿದ್ರೆ, ಮುಮ್ಮೇಳದಲ್ಲಿ ಕೃಷ್ಣ ಲಕ್ಷ್ಮಣ ಮರಕಡ, ನಾರದ ತುಂಬೆ ಚಂದ್ರಹಾಸ, ಮಕರಂದ ಮೌವ್ವರ್ ಬಾಲಕೃಷ್ಣ ಮಣಿಯಾಣಿ, ಸಖಿ ಗುರುತೇಜ ಶೆಟಿ, ಓಡಿಯೂರ್, ಸತ್ಯಭಾಮಾ ಡಾ.ಮಹೇಶ್ ಕುಮಾರ್ ಸಾಣೂರು, ದೇವೇಂದ್ರ ಡಾ.ಶೃತ ಕೀರ್ತಿ ರಾಜ, ಉಜಿರೆ, ಮುರಾಸುರ ಚಂದ್ರಮಂಡಲ ಗಣೇಶ್, ನರಕಾಸುರ ಯಶೋಧರ್ ಪಂಜ. ಇವರುಗಳು ನಡೆಸುವರು.
ಪ್ರತಿಷ್ಠಿತ ಪಾರ್ತಿಸುಬ್ಬ ಪ್ರಶಸ್ತಿ ಪುರಸ್ಕೃತರು- ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ೫ ಗೌರವ ಪ್ರಶಸ್ತಿ ಪುರಸ್ಕೃತರಾದ ಸತ್ಯನಾರಾಯಣ ವರದ ಹಾಸ್ಯಗಾರ, ಮುತ್ತಪ್ಪ ತನಿಯ ಪೂಜಾರಿ, ಎಸ್.ಬಿ.ನರೇಂದ್ರ ಕುಮಾರ್, ಮೂಡಲಗಿರಿಯಪ್ಪ, ಎನ್.ಟಿ.ಮೂರ್ತಾಚಾರ್ಯ, ೧೦ ಯಕ್ಷಸಿರಿ ಪ್ರಶಸ್ತಿ ಪುರಸ್ಕೃತರಾದ ಹಳ್ಳಾಡಿ ಜಯರಾಮ ಶೆಟ್ಟಿ, ಗೋಪಾಲ ಗಾಣಿಗ ಆಜ್ರಿ, ಬೋಳಾರ ಸುಬ್ಬಯ್ಯ ಶೆಟ್ಟಿ, ಸೀತೂರು ಅನಂತ ಪದ್ಮನಾಭರಾವ್, ಕಡತೋಕ ಲಕ್ಷ್ಮಿನಾರಾಯಣ ಶಂಭು ಭಾಗವತರು, ರಾಮ ಸಾಲಿಯಾನ್ ಮಂಗಲ್ಪಾಡಿ, ಕೊಕ್ಕಡ ಈಶ್ವರ ಭಟ್, ಅಡಿಗೋಣ ಬೀರಣ್ಣ ನಾಯ್ಕ, ಭದ್ರಯ್ಯ, ಬಸವರಾಜಪ್ಪ ಹಾಗೂ ೨೦೨೦ನೇ ಸಾಲಿನ ೦೨ ಪುಸ್ತಕ ಬಹುಮಾನಿತರಾದ ಡಾ.ಕೆ.ರಮಾನಂದ ಬನಾರಿ, ಡಾ.ಹೆಚ್.ಆರ್.ಚೇತನ ಇವರುಗಳಿಗೆ ಪ್ರಶಸ್ತಿ ಪ್ರದಾನ ನಡೆಯಲಿದೆ.