ಇಂಧನ ದರ ಏರಿಕೆ: ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ

photo: twitter.com/INCIndia
ಹೊಸದಿಲ್ಲಿ: ಕಳೆದ 10 ದಿನಗಳಿಂದ ಇಂಧನ ಬೆಲೆಯಲ್ಲಿ ತೀವ್ರ ಏರಿಕೆ ಯಾಗುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು ಗುರುವಾರದಂದು ಪ್ರತಿಭಟನೆಯನ್ನು ಆರಂಭಿಸಿದರು.
ದಿಲ್ಲಿಯ ವಿಜಯ್ ಚೌಕ್ನಲ್ಲಿಂದು ಪ್ರತಿಭಟನೆಯ ನೇತೃತ್ವವಹಿಸಿ ಮಾತನಾಡಿದ ರಾಹುಲ್ ಗಾಂಧಿ, "ಕಳೆದ 10 ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಒಂಬತ್ತು ಬಾರಿ ಏರಿಕೆಯಾಗಿದೆ, ಏರುತ್ತಿರುವ ಬೆಲೆಯನ್ನು ನಿಯಂತ್ರಣಕ್ಕೆ ತರಬೇಕು ಎಂದು ನಾವು ಒತ್ತಾಯಿಸುತ್ತೇವೆ. ಈ ವಿಷಯವಾಗಿ ಕಾಂಗ್ರೆಸ್ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ’’ ಎಂದರು.
ಇತರ ಪಕ್ಷದ ನಾಯಕರೊಂದಿಗೆ ಪ್ರತಿಭಟನೆಯಲ್ಲಿ ಭಾಗವಹಿಸಿದ ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ, "ಐದು ರಾಜ್ಯಗಳಲ್ಲಿ ಚುನಾವಣೆ ಮುಗಿದ ತಕ್ಷಣ ಇಂಧನ ಬೆಲೆಯಲ್ಲಿ ಏರಿಕೆಯಾಗಲಿದೆ ಎಂದು ನಾವು ಭವಿಷ್ಯ ನುಡಿದಿದ್ದೆವು. ಇಂಧನ ಬೆಲೆ ಏರಿಕೆಯನ್ನು ಹಿಂಪಡೆಯಬೇಕೆಂದು ನಾವು ಒತ್ತಾಯಿಸುತ್ತೇವೆ. ಇಂಧನ ಬೆಲೆ ಏರಿಕೆಯಿಂದ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳನ್ನು ಸರಕಾರ ಅರ್ಥಮಾಡಿಕೊಳ್ಳುತ್ತಿಲ್ಲ'' ಎಂದರು.
#WATCH Congress MP Rahul Gandhi along with party leaders holds protest against fuel price hike in Delhi pic.twitter.com/uIXJMoveLj
— ANI (@ANI) March 31, 2022







