ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ: ಕುಮಾರಸ್ವಾಮಿ ಹೇಳಿದ್ದೇನು?

ನಿಖಿಲ್ | ಎಚ್.ಡಿ.ಕುಮಾರಸ್ವಾಮಿ
ರಾಮನಗರ, ಮಾ. 31: ‘ಮುಂದಿನ ಲೋಕಸಭೆ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿಯನ್ನು ಮಂಡ್ಯದ ಲೋಕಸಭೆ ಕ್ಷೇತ್ರದಿಂದಲೇ ಕಣಕ್ಕಿಳಿಸುತ್ತೇನೆ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.
ಗುರುವಾರ ಜಿಲ್ಲೆಯ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ‘ಮುಂದಿನ ಲೋಕಸಭಾ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿನ ಮಂಡ್ಯದಿಂದಲೇ ಸ್ಪರ್ಧೆ ಮಾಡಿಸುತ್ತೇನೆ. ಮಂಡ್ಯ ಜಿಲ್ಲೆಯ ಜನರು ಮುಂದಿನ ಚುನಾವಣೆಯಲ್ಲಿ ಉತ್ತರ ಕೊಡುತ್ತಾರೆ. ಕಳೆದ ಚುನಾವಣೆಯಲ್ಲಿ ನಮ್ಮ ವಿರುದ್ಧ ಕುತಂತ್ರದ ರಾಜಕಾರಣ ನಡೆಯಿತು. ಕಾಂಗ್ರೆಸ್, ಬಿಜೆಪಿ, ರೈತಸಂಘ ಒಂದಾಗಿದ್ದರು' ಎಂದು ಕುಮಾರಸ್ವಾಮಿ ಕಿಡಿಕಾರಿದರು.
Next Story





