Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. VIDEO- ಆಕ್ಸಿಜನ್ ಇಲ್ಲದೇ ಜನ ...

VIDEO- ಆಕ್ಸಿಜನ್ ಇಲ್ಲದೇ ಜನ ಸಾಯುತ್ತಿದ್ದಾಗ ಹಿಂದೂ ಪರಿಷತ್, ಬಜರಂಗದಳದವರು ಎಲ್ಲಿದ್ರು?: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ31 March 2022 7:04 PM IST
share
VIDEO- ಆಕ್ಸಿಜನ್ ಇಲ್ಲದೇ ಜನ  ಸಾಯುತ್ತಿದ್ದಾಗ  ಹಿಂದೂ ಪರಿಷತ್, ಬಜರಂಗದಳದವರು ಎಲ್ಲಿದ್ರು?: ಕುಮಾರಸ್ವಾಮಿ

ಬೆಂಗಳೂರು, ಮಾ. 31: ‘ಸಮಾಜದ ಶಾಂತಿ ಕದಡುತ್ತಿರುವ ವಿಶ್ವ ಹಿಂದೂ ಪರಿಷತ್, ಭಜರಂಗದಳದ ಕೆಲ ಕಿಡಿಗೇಡಿಗಳು ನಿಜಕ್ಕೂ ಸಮಾಜಘಾತುಕರು. ದಿನ ಬೆಳಗಾದರೆ ಕರಪತ್ರಗಳನ್ನು ಹಂಚುತ್ತಾ ಜನರ ಮನಸ್ಸನ್ನು ಕೆಡಿಸುತ್ತಿರುವ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಸರಕಾರವನ್ನು ಒತ್ತಾಯಿಸಿದ್ದಾರೆ.

ಗುರುವಾರ ರಾಮನಗರದ ಚನ್ನಪಟ್ಟಣದ ಚಕ್ಕೆರೆ ಗ್ರಾಮದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಹಿಂಸೆ ಹಾಗೂ ಶಾಂತಿಗೆ ಭಂಗ ತರುತ್ತಿರುವ ಸಂಘಟನೆಗಳ ವಿರುದ್ಧ ಕಿಡಿಕಾರಿದರು. ದಿನ ಬೆಳಗಾದರೆ ತಹಸೀಲ್ದಾರ್ ಬಳಿ ಹೋಗಿ ಅರ್ಜಿ ಕೊಡುವುದು, ಅಂಗಡಿಗಳಿಗೆ ಹೋಗಿ ಕರಪತ್ರ ಕೊಡುವುದನ್ನು ಇವರು ಮಾಡುತ್ತಿದ್ದಾರೆ. ಇದರಿಂದ ಸಮಾಜದಲ್ಲಿ ಅನಾಹುತ ಉಂಟಾಗುತ್ತಿದೆ' ಎಂದು ಟೀಕಿಸಿದರು.

‘ವಿಶ್ವ ಹಿಂದೂ ಪರಿಷತ್, ಭಜರಂಗದಳದವರು ಕಿಡಿಗೇಡಿಗಳು, ಸಮಾಜಘಾತುಕರು. ಇವರಿಗೆ ರೈತರ ಬದುಕು ಗೊತ್ತಿದೆಯಾ? ನಮ್ಮ ರೈತರು ಕತ್ತರಿಸುವ ಮಾಂಸ ಸ್ವಚ್ಛ ಮಾಡಲು ಅದೇ ಸಮಾಜದವರು ಬರಬೇಕು. ಈಗ ಇವರು ಬಂದು ‘ಹಲಾಲ್ ಕಟ್-ಜಟ್ಕಾ ಕಟ್' ಅಂತಿದ್ದಾರೆ. ರೈತರಿಂದ ಮಾವು, ದ್ರಾಕ್ಷಿ, ರೇಶ್ಮೆ ಖರೀದಿ ಮಾಡಲಿಕ್ಕೆ ಈ ಪೋಲಿಗಳು ಬರುತ್ತಾರಾ?' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

‘ಅಕಾಲಿಕ ಮಳೆಯಿಂದಾಗಿ ಮಾವು ನಷ್ಟವಾಗಿದೆ. ರೈತರ ಕಷ್ಟ ಕಾಲಕ್ಕೆ ಇವರು ನೆರವಿಗೆ ಬರುತ್ತಾರಾ? ಬೆಳೆ ಖರೀದಿ ಮಾಡುತ್ತಾರಾ? ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದವರು ತಮ್ಮ ಹೊಟ್ಟೆಪಾಡಿಗೆ, ದೇಶ ಹಾಳು ಮಾಡಲು ಇಂತಹ ವಿಚಾರ ಇಟ್ಟುಕೊಂಡು ಬಂದಿದ್ದಾರೆ. ಇದಕ್ಕೆಲ್ಲ ನಾನು ಕೇರ್ ಮಾಡುವುದಿಲ್ಲ' ಎಂದು ಎಚ್ಚರಿಕೆ ನೀಡಿದರು.

ಆಕ್ಸಿಜನ್ ಇಲ್ಲದೆ ಜನ ಸತ್ತರಲ್ಲ ಆಗ ಎಲ್ಲಿದ್ದರು ಇವರು: ‘ಇಷ್ಟು ವರ್ಷ ‘ಹಲಾಲ್' ತಿಂದಿದ್ದೇವೆ, ಏನಾಗಿದೆ ಚೆನ್ನಾಗಿದ್ದೀವಲ್ಲ. ಈಗ ಹಲಾಲ್ ತಿಂದರೆ ತೊಂದರೆ ಆಗುತ್ತದಾ? ನಮ್ಮ ದೇವರು ಮೆಚ್ಚಲ್ವ? ಹಲವಾರು ವರ್ಷಗಳಿಂದ ಹಲಾಲ್ ನಡೆಯುತ್ತಿದೆ, ಈಗಿನದ್ದಲ್ಲ. ಆಸ್ಪತ್ರೆಯಲ್ಲಿ ಆಕ್ಸಿಜನ್ ಇಲ್ಲದೆ ಜನ ಸತ್ತರು. ಆ ಸಂದರ್ಭವನ್ನು ಸರಕಾರ ಹೇಗೆ ನಿರ್ವಹಣೆ ಮಾಡಿತು ಎನ್ನುವುದನ್ನು ನಾವೆಲ್ಲ ನೋಡಿದ್ದೇವೆ. ಬಿಜೆಪಿ ಸರಕಾರದ ಯೋಗ್ಯತೆಗೆ ಆಸ್ಪತ್ರೆ ನಿರ್ವಹಣೆ ಮಾಡಲು ಆಗಲಿಲ್ಲ. ಆಗ ಎಲ್ಲಿದ್ದರು ವಿಶ್ವ ಹಿಂದೂ ಪರಿಷತ್, ಭಜರಂಗದಳದವರು?' ಎಂದು ಕುಮಾರಸ್ವಾಮಿ ಗುಡುಗಿದರು.

ಸಿಎಂ ಮೌನ ಸರಿಯಲ್ಲ: ‘ರಾಜ್ಯದಲ್ಲಿ  ಇಷ್ಟೆಲ್ಲಾ ನಡೆಯುತ್ತಿದ್ದರೂ ಏನು ಗೊತ್ತಿಲ್ಲದಂತೆ ರಾಜ್ಯ ಸರಕಾರ ಮೌನವಾಗಿರಬಾರದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೌನಕ್ಕೆ ಅರ್ಥ ಏನು? ಸಮಾಜ ಒಡೆಯುವ ಶಕ್ತಿಗಳು ಹ್ಯಾಂಡ್ ಬಿಲ್ ಹಂಚುತ್ತಿದ್ದಾರೆ. ಅಂತಹ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು' ಎಂದು ಅವರು ಆಗ್ರಹಪಡಿಸಿದರು.

‘ಯಾವ ಸಂವಿಧಾನಕ್ಕೆ ಗೌರವಿಸುತ್ತಿದ್ದೀರಿ, ಏಕೆ ಅಂಬೇಡ್ಕರ್ ಜಯಂತಿ ಆಚರಿಸುತ್ತೀರಿ? ಅದೆಲ್ಲ ಯಾವ ಪುರುμÁರ್ಥಕ್ಕೆ? ಇಂಥದ್ದನ್ನು ನಡೆಯಲು ಬಿಟ್ಟು ಸಂವಿಧಾನ, ಅಂಬೇಡ್ಕರ್ ಅವರ ಹೆಸರು ಹೇಳಿದರೆ ಏನು ಪ್ರಯೋಜನ? ಎಂದ ಅವರು, ನನಗೆ ವೋಟ್ ಮುಖ್ಯವಲ್ಲ, ಈ ನಾಡು ಶಾಂತಿಯಿಂದ ಬದುಕಬೇಕು. ಅದು ಮುಖ್ಯ ನನಗೆ. ನಾನು ಮೌನವಾಗಿರಲು ಸಾಧ್ಯವಿಲ್ಲ' ಎಂದು ಕುಮಾರಸ್ವಾಮಿ ಕಿಡಿಕಾರಿದರು. 

‘ಕಾಂಗ್ರೆಸ್‍ನವರಿಗೆ ಮಾತನಾಡಲು ತಾಕತ್ತಿಲ್ಲ. ನಾನು ಸುಮ್ಮನಿರಲಾರೆ. ಹಿಂದೂಗಳು ವೋಟ್ ಹಾಕ್ತಾರೋ ಇಲ್ಲವೋ ಎಂಬ ಭಯ ನನಗಿಲ್ಲ. ಉತ್ತರ ಪ್ರದೇಶದಲ್ಲಿ ನಿಮ್ಮ ಆಟ ಆಡಿಕೊಳ್ಳಿ, ಇಲ್ಲಿ ಬೇಡ' ಎಂದು ಪ್ರಚೋದನೆ ನೀಡುತ್ತಿರುವ ಸಂಘಟನೆಗಳಿಗೆ ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಎಚ್ಚರಿಕೆ ನೀಡಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X