ಪ್ರಧಾನಮಂತ್ರಿ ಶಿಷ್ಯವೇತನ: ಅವಧಿ ವಿಸ್ತರಣೆ
ಉಡುಪಿ : ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ವತಿಯಿಂದ ಪಿಯುಸಿ ೨ನೇ ವರ್ಷ ಹಾಗೂ ಡಿಪ್ಲೋಮಾ ೩ನೇ ವರ್ಷದಲ್ಲಿ ಶೇ.60 ಅಂಕ ಪಡೆದು ಪ್ರಸಕ್ತ ಸಾಲಿನಲ್ಲಿ ತಾಂತ್ರಿಕ ಮತ್ತು ವೃತ್ತಿಪರ ಕೋರ್ಸು ಗಳಿಗೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳು, ಪ್ರಧಾನ ಮಂತ್ರಿ ಶಿಷ್ಯವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಎ.೧೫ ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ -www.ksb.gov.in- ಅನ್ನು ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story