Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದೇಶದಲ್ಲಿ ಹರಡುತ್ತಿರುವ ದ್ವೇಷಕ್ಕೆ...

ದೇಶದಲ್ಲಿ ಹರಡುತ್ತಿರುವ ದ್ವೇಷಕ್ಕೆ ಸಿದ್ಧಗಂಗಾ ಮಠದಲ್ಲಿದೆ ಪರಿಹಾರ: ರಾಹುಲ್ ಗಾಂಧಿ

ವಾರ್ತಾಭಾರತಿವಾರ್ತಾಭಾರತಿ31 March 2022 9:44 PM IST
share
ದೇಶದಲ್ಲಿ ಹರಡುತ್ತಿರುವ ದ್ವೇಷಕ್ಕೆ ಸಿದ್ಧಗಂಗಾ ಮಠದಲ್ಲಿದೆ ಪರಿಹಾರ: ರಾಹುಲ್ ಗಾಂಧಿ

ತುಮಕೂರು,ಮಾ.31: 'ಸಿದ್ಧಗಂಗಾ ಮಠಕ್ಕೆ ಇಂದಿರಾಗಾಂಧಿ,ರಾಜೀವ್ ಗಾಂಧಿ, ಸೋನಿಯಾಗಾಂಧಿ ಅವರು ಭೇಟಿ ನೀಡಿದ್ದು, ಮಠದೊಂದಿಗೆ ಅವಿನಾಭಾವ ಸಂಬಂಧ ನಮಗೆ ಇದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ.

ನಡೆದಾಡುವ ದೇವರು, ಕರ್ನಾಟಕ ರತ್ನ ಡಾ.ಶ್ರೀಶಿವಕುಮಾರಸ್ವಾಮೀಜಿಗಳ 115ನೇ ಗುರುವಂದನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಗುರುವಾರ ಸಂಜೆ ಶ್ರೀಮಠಕ್ಕೆ ಭೇಟಿ ನೀಡಿ,ಹಿರಿಯ ಶ್ರೀಗಳ ಗದ್ದುಗೆ ದರ್ಶನ ಪಡೆದು, ಪ್ರಾರ್ಥನೆ ಸಲ್ಲಿಸಿದ ನಂತರ, ಸಂಜೆ ನಡೆಯುವ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ, ಕಿರಿಯ ಶ್ರೀಗಳ ಆಶೀರ್ವಾದ ಪಡೆದ ನಂತರ ಮಾತನಾಡುತಿದ್ದ ಅವರು,ಸಿದ್ದಗಂಗಾ ಮಠದಲ್ಲಿ ವಿದ್ಯಾರ್ಥಿಗಳೊಂದಿಗೆ, ಸ್ವಾಮೀಜಿಗಳೊಂದಿಗೆ ಮಾತನಾಡುವ ಅವಕಾಶ ಸಿಕ್ಕಿರುವುದು ಸಂತೋಷದ ವಿಷಯ, ಜಾತಿ ಮತ ಧರ್ಮದ ಬೇಧವಿಲ್ಲದೆ ಎಲ್ಲ ಸಮುದಾಯಗಳಿಗೆ ವಿದ್ಯಾಭ್ಯಾಸವನ್ನು ನೀಡುವ ಮೂಲಕ ಲಕ್ಷಾಂತರ ಮಕ್ಕಳಿಗೆ ಬೆಳಕು ನೀಡಿದ್ದಾರೆ ಎಂದರು.

ದೇಶದಲ್ಲಿ ಹರಡುತ್ತಿರುವ ದ್ವೇಷಕ್ಕೆ ಪರಿಹಾರ ಸಿದ್ಧಗಂಗಾ ಮಠದಲ್ಲಿದೆ,ಇಲ್ಲಿರುವ ಸೌಹಾರ್ದತೆ ಇಡೀ ದೇಶಕ್ಕೆ ಇಂದು ಅವಶ್ಯಕವಾಗಿದ್ದು,ಮಠದೊಂದಿಗೆ ಇರುವ ಸಂಬಂಧವನ್ನು ಮುಂದುವರೆಸಿಕೊಂಡು ಹೋಗುವುದಾಗಿ ಹೇಳಿದ ಅವರು, ಡಾ.ಶಿವಕುಮಾರಸ್ವಾಮೀಜಿ ಅವರು ಇಡೀ ದೇಶಕ್ಕೆ ಮಾರ್ಗದರ್ಶನ ಮಾಡಿದರು ಎಂದು ಸ್ಮರಿಸಿದರು.

ಕಳೆದ ಬಾರಿ ಮಠಕ್ಕೆ ಭೇಟಿ ನೀಡಿದ್ದಾಗ ಡಾ.ಶಿವಕುಮಾರಸ್ವಾಮೀಜಿ ಅವರು ನಮ್ಮೊಂದಿಗೆ ಇದ್ದರು.ಆದರೆ ಈಗ ಅವರು ನಮ್ಮೊಂದಿಗಿಲ್ಲ ಆದರೆ ನಮಗೆ ದಾರಿದೀಪವಾಗಿದ್ದಾರೆ, ಯುವಕರಿಗೆ ಶಿಕ್ಷಣ, ಬಡವರಿಗೆ ಉದ್ಯೋಗ ನೀಡಬೇಕಾಗಿದೆ, ಅವರ ದಾರಿಯಲ್ಲಿಯೇ ಸಾಗಬೇಕಿದೆ ಎಂದು ಹೇಳಿದರು.

ಸಿದ್ಧಗಂಗಾ ಮಠದ ಮಠಾಧೀಶರಾದ ಸಿದ್ಧಲಿಂಗಸ್ವಾಮೀಜಿ ಮಾತನಾಡಿ, ರಾಹುಲ್ ಗಾಂಧಿ ಭೇಟಿ ನೀಡಿ, ಶ್ರೀಗಳಿಗೆ ಗೌರವ ಸಮರ್ಪಣೆ ಮಾಡಿರುವುದು ಸಂತಸದ ವಿಷಯ, ಸೋನಿಯಾಗಾಂಧಿ ಅವರು ಮಠಕ್ಕೆ ಬಂದಾಗ ಅವರ ಕಾರಿನಲ್ಲಿ ನಾನು ,ಡಾ.ಶಿವಕುಮಾರಸ್ವಾಮೀಜಿ, ಸೋನಿಯಾ ಅವರು ಪ್ರಯಾಣ ಮಾಡಿದ್ದೆವು.ಬಸವಣ್ಣನವರು 12ನೇ ಶತಮಾನದಲ್ಲಿ ಹೇಳಿರುವಂತೆ ಎಲ್ಲರನ್ನು ನಮ್ಮವರು ಎಂದು ಭಾವಿಸಬೇಕು.ಇಂತಹ ಮನೋಭಾವನೆಯನ್ನು ಸಿದ್ಧಗಂಗಾ ಮಠ ಮಾಡುತ್ತಿದೆ ಎಂದು ರಾಹುಲ್ ಅವರು ಸ್ಮರಿಸಿದ್ದಾರೆ ಎಂದು ಹೇಳಿದರು.

ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರವನ್ನು ವಹಿಸಿದ್ದಾರೆ, ಪ್ರಜಾ ಪ್ರಭುತ್ವದಲ್ಲಿ ನಾಯಕತ್ವ ಚೆನ್ನಾಗಿದ್ದಾಗ ಮಾತ್ರ ಅದು ಚೆನ್ನಾಗಿರುತ್ತದೆ ಎಂದು ಸ್ವಾಮೀಜಿಗಳು ಹೇಳುತ್ತಿದ್ದರು, ಎಲ್ಲ ಗುಣಗಳನ್ನು ಹೊಂದಿರುವ ರಾಹುಲ್ ಅವರಿಗೆ ದೇವರು ಎಲ್ಲ ರೀತಿಯ ಶಕ್ತಿಯನ್ನು ನೀಡಲಿ ಎಂದು ಹಾರೈಸಿದರು.

ಈ ವೇಳೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್,  ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್, ಈಶ್ವರ ಖಂಡ್ರೆ, ಕೆ.ಎಚ್.ಮುನಿಯಪ್ಪ, ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್, ಮಾಜಿ ಸಂಸದ ಆರ್.ಧ್ರುವನಾರಾಯಣ್, ಶಾಸಕರಾದ ವೆಂಕಟರಮಣಪ್ಪ, ಲಕ್ಷ್ಮೀ ಹೆಬ್ಬಾಳ್ಕರ್, ಡಾ.ರಂಗನಾಥ್, ಮಾಜಿ ಶಾಸಕ ರಫೀಕ್ ಅಹಮದ್,ಶಫಿ ಅಹಮದ್,ಎಂಎಲ್ಸಿ ರಾಜೇಂದ್ರ, ಮಾಜಿ ಎಂಎಲ್ಸಿ ಬೆಮಲ್ ಕಾಂತರಾಜು, ಮುಖಂಡರಾದ ಎಚ್.ವಿ.ವೆಂಕಟೇಶ್, ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ನೆಲಪಾಡ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X