ಪುನೀತ್ ರಾಜಕುಮಾರ್ ನಿವಾಸಕ್ಕೆ ರಾಹುಲ್ ಗಾಂಧಿ ಭೇಟಿ

photo- twitter
ಬೆಂಗಳೂರು: ದಿವಂಗತ ನಟ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಭೇಟಿ ನೀಡಿದ್ದಾರೆ.
ಶುಕ್ರವಾರ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ರಾತ್ರಿ ವೇಳೆಗೆ ಬೆಂಗಳೂರಿಗೆ ಆಗಮಿಸಿ ಪುನೀತ್ ನಿವಾಸಕ್ಕೆ ತೆರಳಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಈ ವೇಳೆ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್, ಎಂ.ಬಿ.ಪಾಟೀಲ್, ಬಿ.ಕೆ.ಹರಿಪ್ರಸಾದ್ ಉಪಸ್ಥಿತರಿದ್ದರು.
ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಅವರು ಪವರ್ ಸ್ಟಾರ್ ದಿವಂಗತ ಪುನೀತ್ ರಾಜಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಗೆ ಸಾಂತ್ವನ ಹೇಳಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ @rssurjewala, ಕೆಪಿಸಿಸಿ ಅಧ್ಯಕ್ಷರಾದ @DKShivakumar ಅವರು ಸೇರಿದಂತೆ ಹಲವು ನಾಯಕರು ಜೊತೆಗಿದ್ದರು. pic.twitter.com/9p7glupwPD
— Karnataka Congress (@INCKarnataka) March 31, 2022
Next Story







