ಶ್ರೀ ಸಿದ್ಧಗಂಗಾ ಮಠ: ಡಾ.ಶಿವಕುಮಾರ ಸ್ವಾಮೀಜಿಯ115ನೇ ಗುರುವಂದನೆ ಕಾರ್ಯಕ್ರಮಕ್ಕೆ ಚಾಲನೆ
ತುಮಕೂರು, ಎ.1: ತುಮಕೂರಿನ ಶ್ರೀ ಸಿದ್ಧಗಂಗಾ ಮಠದ ಆವರಣದಲ್ಲಿ ಡಾ.ಶಿವಕುಮಾರ ಸ್ವಾಮೀಜಿಯ 115ನೇ ಜನ್ಮದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ 'ನಡೆದಾಡೋ ದೇವರ ಬಸವ ಭಾರತ' ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಡಾ. ಶಿವಕುಮಾರ್ ಸ್ವಾಮಿಗಳಿಗೆ ನುಡಿನಮನ ಸಲ್ಲಿಸಿದರು. ಸಿದ್ದಗಂಗಾಮಠದ ಸಿದ್ದಲಿಂಗಸ್ವಾಮೀಜಿ, ಸುತ್ತೂರಿನ ಶಿವರಾತ್ರಿ ದೇಶೀಕೇಂದ್ರ ಶ್ರೀ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ, ನಾರಾಯಣಸ್ವಾಮಿ, ಭಗವಂತ ಖೂಬಾ, ಸಚಿವರಾದ ಆರಗ ಜ್ಞಾನೇಂದ್ರ, ಮಾಧುಸ್ವಾಮಿ, ಉಮೇಶ ಕತ್ತಿ, ಸಂಸದ ಬಸವರಾಜು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ ಮತ್ತು ಇತರರು ಉಪಸ್ಥಿತರಿದ್ದರು.
Next Story