ಡಾ.ರವೀಂದ್ರನಾಥ ಶಾನುಬಾಗ್ ರಿಗೆ ಹೃದಯಾಘಾತ, ಆಸ್ಪತ್ರೆಗೆ ದಾಖಲು

ಮಣಿಪಾಲ, ಎ.1: ಉಡುಪಿಯ ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಟಾನದ ಅಧ್ಯಕ್ಷ ಮತ್ತು ಹಿರಿಯ ನಾಗರಿಕರ ಹಕ್ಕುಗಳ ಹೋರಾಟಗಾರ ಡಾ.ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತ ಆಗಿದ್ದು. ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶಾನುಭಾಗ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಳೆದ ರಾತ್ರಿ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.
ಡಾ. ಶಾನುಭಾಗ್ ಆರೋಗ್ಯ ಸ್ಥಿರವಾಗಿದ್ದು ಚೇತರಿಸಿಕೊಳ್ಳುತಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
Next Story