ದ.ಕ. ಜಿಲ್ಲೆಯಲ್ಲಿ ಐದು ದಿನಗಳ ಕಾಲ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಮಂಗಳೂರು : ದ.ಕ. ಜಿಲ್ಲೆಯಲ್ಲಿ ಶುಕ್ರವಾರ ಮೋಡ ಕವಿದ ವಾತಾವರಣ ಕಂಡು ಬಂತು. ಆದಾಗ್ಯೂ ಬಿಸಿಲ ಧಗೆ ತಾಳಲಾರಷ್ಟಿತ್ತು.
ಜಿಲ್ಲೆಯ ಬೆಳ್ತಂಗಡಿ, ಕಬಕ, ಸುಳ್ಯದ ಕೆಲವು ಕಡೆಗಳಲ್ಲಿ ಗುಡಗು ಮಿಂಚು ಸಹಿತ ಮಳೆಯಾಗಿದೆ. ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ ೨೫.೯ ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಹವಾಮಾನ ಇಲಾಖೆ ಮುಂದಿನ ಐದು ದಿನಗಳ ಕಾಲ ಗುಡುಗು ಸಹಿತ ಮಳೆಯ ಮುನ್ಸೂಚನೆ ನೀಡಿದೆ.
Next Story