ಉಡುಪಿ: ಎ.20ರವರೆಗೆ ನಿಷೇಧಾಜ್ಞೆ ಮುಂದುವರಿಕೆ
ಉಡುಪಿ : ಪ್ರಸ್ತುತ ಜಿಲ್ಲೆಯಲ್ಲಿ ನಡೆಯುತ್ತಿರುವ ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಹಿತವನ್ನು ಕಾಪಾಡುವ ದೃಷ್ಟಿಯಿಂದ ಎಪ್ರಿಲ್ 4ರ ಬೆಳಗ್ಗೆ 6 ಗಂಟೆಯಿಂದ ಎ.20ರ ಸಂಜೆ 6 ಗಂಟೆಯವರೆಗೆ (ರಜಾ ದಿನಗಳನ್ನು ಹೊರತುಪಡಿಸಿ) ಜಿಲ್ಲೆಯ ಎಲ್ಲಾ ಪ್ರೌಢಶಾಲೆ, ಪದವಿ ಪೂರ್ವ, ಪಾಲಿಟೆಕ್ನಿಕ್ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200 ಮೀ. ಪ್ರದೇಶದಲ್ಲಿ ದಂಡ ಪ್ರಕ್ರಿಯೆ ಸಂಹಿತೆ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.
Next Story





