ನಗರಸಭೆ: ಆಸ್ತಿ ತೆರಿಗೆಯಲ್ಲಿ ಶೇ.೫ರಷ್ಟು ರಿಯಾಯಿತಿ
ಉಡುಪಿ : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಕಟ್ಟಡ ಮತ್ತು ಕೃಷಿಯೇತರ ನಿವೇಶನಗಳ ಮಾಲಕರು ಹಾಗೂ ಅನುಭೋಗದಾರರಿಗೆ ೨೦೨೨-೨೩ನೇ ಸಾಲಿನ ಆಸ್ತಿತೆರಿಗೆಯಲ್ಲಿ ಶೇ.೫ರಷ್ಟು ರಿಯಾಯಿತಿಯನ್ನು ಪಡೆಯಲು ಎ.೩೦ರವರೆಗೆ ಅವಕಾಶವಿದ್ದು, ಉಡುಪಿ ನಗರಸಭಾ ವ್ಯಾಪ್ತಿಯ ಸಾರ್ವಜನಿಕರು ತಮ್ಮ ಆಸ್ತಿ ತೆರಿಗೆಯನ್ನು ರಿಯಾಯಿತಿಯೊಂದಿಗೆ ನಿಗದಿತ ಅವಧಿಯೊಳಗೆ ಪಾವತಿಸಿ, ನಗರಸಭೆಯ ಅಭಿವೃದ್ಧಿ ಕಾರ್ಯಗಳಿಗೆ ನಗರಸಭೆ ಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story