ಪರೀಕ್ಷಾ ನೇಮಕಾತಿಗೆ ಅರ್ಜಿ ಆಹ್ವಾನ
ಉಡುಪಿ, ಎ.೧:ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ನೇಮಕಾತಿ ಪ್ರಾಧಿಕಾರವು ಸಿಬ್ಬಂದಿ ಮತ್ತು ಹವಾಲ್ದಾರ್ (ಸಿಬಿಐಸಿ- ಸಿಬಿಎನ್) ಹುದ್ದೆಗಳಿಗೆ ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷಾ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಮಾನ್ಯತೆ ಪಡೆದ ಮಂಡಳಿಯಿಂದ ಎಸೆಸೆಲ್ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವ ಕುರಿತು ಪ್ರಮಾಣ ಪತ್ರ ಹೊಂದಿರಬೇಕು. ಅಭ್ಯರ್ಥಿಗಳು ಆನ್‌ಲೈನ್ ಮೂಲಕ - https://ssc.nic.in- ನಲ್ಲಿ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಎ.೩೦ ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ಸಹಾಯವಾಣಿ ಸಂಖ್ಯೆ :೦೮೦-೨೫೫೦೨೫೨೦, ೯೪೮೩೮೬೨೦೨೦ಅನ್ನು ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story





