ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಉಡುಪಿ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-೧, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಎ.೩೦ರವರೆಗೆ ವಿಸ್ತರಿಸಲಾಗಿದೆ.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಳಿಗಾಗಿ ವೆಬ್ಸೈಟ್ -www.ssp.postmatric.karnataka.gov.in- ಅಥವಾ ಇಲಾಖೆಯ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫, ೮೦೫೦೭೭೦೦೦೪ ಅನ್ನು ಸಂಪರ್ಕಿ ಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story