ಉಡುಪಿ: ಕೋವಿಡ್ ನಿಂದ ಇಬ್ಬರು ಗುಣಮುಖ; ಜಿಲ್ಲೆಯಲ್ಲಿ 3 ಸಕ್ರಿಯ ಸೋಂಕು
ಉಡುಪಿ : ಜಿಲ್ಲೆಯಲ್ಲಿ ಇಂದು ಯಾವುದೇ ಕೋವಿಡ್ ಸೋಂಕಿತರು ಪತ್ತೆಯಾಗಿಲ್ಲ. ಇಬ್ಬರು ಸೋಂಕಿನಿಂದ ಗುಣಮುಖರಾಗಿದ್ದು, ಜಿಲ್ಲೆಯಲ್ಲಿ ಮೂವರು ಮಾತ್ರ ಸೋಂಕಿಗೆ ಚಿಕಿತ್ಸೆಯಲ್ಲಿದ್ದಾರೆ.
ದಿನದಲ್ಲಿ ಒಟ್ಟು ೨೪೦ ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿತ್ತು. ಉಡುಪಿ ತಾಲೂಕಿನ ೨೦೨, ಕುಂದಾಪುರದ ೨೬ ಹಾಗೂ ಕಾರ್ಕಳ ತಾಲೂಕಿನ ೧೨ ಮಂದಿಯಲ್ಲಿ ಯಾರೂ ಸೋಂಕಿತರು ಪತ್ತೆಯಾಗಿಲ್ಲ.
ದಿನದಲ್ಲಿ ಇಬ್ಬರು ಗುಣಮುಖರಾಗಿರುವುದರಿಂದ, ಒಬ್ಬರು ಐಸಿಯುನಲ್ಲಿ ಹಾಗೂ ಇಬ್ಬರು ಅವರ ಮನೆಗಳಲ್ಲಿ ಚೇತರಿಸಿಕೊಳ್ಳುತಿದ್ದಾರೆ. ಜ.೧ರ ನಂತರ ಕೊರೋನಕ್ಕೆ ಪಾಸಿಟಿವ್ ಬಂದವರ ಸಂಖ್ಯೆ ೧೮,೪೩೮ ಆದರೆ, ಚೇತರಿಸಿ ಕೊಂಡವರ ಸಂಖ್ಯೆ ೧೮೫೦೨ಕ್ಕೇರಿದೆ. ಇಂದು ಸಹ ಜಿಲ್ಲೆಯಲ್ಲಿ ಸೋಂಕಿಗೆ ಯಾರೂ ಬಲಿಯಾಗಿಲ್ಲ.
೨೬೭೨ ಮಕ್ಕಳಿಗೆ ಲಸಿಕೆ: ಜಿಲ್ಲೆಯಲ್ಲಿ ಇಂದು ೧೨ರಿಂದ ೧೪ವರ್ಷದೊಳಗಿನ ಒಟ್ಟು ೨೬೭೨ ಮಕ್ಕಳಿಗೆ ಕೋವಿಡ್‌ನ ಮೊದಲ ಡೋಸ್ ಲಸಿಕೆಯನ್ನು ನೀಡಲಾ ಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಈವರೆಗೆ ಒಟ್ಟು ೨೩೦೧೦ ಮಕ್ಕಳು ಈ ಲಸಿಕೆಯನ್ನು ಪಡೆದಂತಾಗಿದೆ.
ದಿನದಲ್ಲಿ ಒಟ್ಟು ೩೨೭೪ ಮಂದಿ ಇಂದು ಲಸಿಕೆಯನ್ನು ಪಡೆದು ಕೊಂಡಿದ್ದಾರೆ. ೬೦ ವರ್ಷ ಮೇಲಿನ ೪೧೮ ಮಂದಿ ಹಿರಿಯ ನಾಗರಿಕರು ಸೇರಿದಂತೆ ಒಟ್ಟು ೪೩೬ ಮಂದಿ ಮುನ್ನೆಚ್ಚರಿಕೆಯ ಒಂದು ಡೋಸ್ ಲಸಿಕೆ ಪಡೆದರೆ, ಒಟ್ಟು ೨೬೮೯ ಮಂದಿ ಮೊದಲ ಡೋಸ್ ಹಾಗೂ ೧೪೯ ಮಂದಿ ಎರಡನೇ ಡೋಸ್ ಲಸಿಕೆಯನ್ನು ಪಡೆದುಕೊಂಡಿದ್ದಾರೆ.







