ರಾಜ್ಯಾದ್ಯಂತ 62 ಕೊರೋನ ಪ್ರಕರಣ ದೃಢ, 93 ಜನರು ಗುಣಮುಖ

ಸಾಂದರ್ಭಿಕ ಚಿತ್ರ (PTI)
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 62 ಹೊಸ ಕೊರೋನ ಪ್ರಕರಣಗಳು ದೃಢವಾಗಿದ್ದು, 93 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3945576ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 40,054ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 1,561ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 62 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬೆಂಗಳೂರು ನಗರ 48, ಬೀದರ್ 1, ಚಾಮರಾಜನಗರ 1, ಚಿತ್ರದುರ್ಗ 2, ದಕ್ಷಿಣ ಕನ್ನಡ 1, ಧಾರವಾಡ 1, ಕೋಲಾರ 4, ರಾಮನಗರ 3, ಶಿವಮೊಗ್ಗ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
Next Story





