ಭ್ರಷ್ಟಾಚಾರ ಪ್ರಕರಣ: ಮಾಜಿ ಸಚಿವ ಅನಿಲ್ ದೇಶಮುಖ್, ಇತರ ಇಬ್ಬರು ಸಿಬಿಐ ಕಸ್ಟಡಿಗೆ

ಮುಂಬೈ : ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಹಾಗೂ ಅಮಾನತುಗೊಂಡ ಪೊಲೀಸ್ ಅಧಿಕಾರಿಗಳಾದ ಸಚಿನ್ ವಾಝೆ, ಕುಂದನ್ ಶಿಂಧೆಯನ್ನು ಸಿಬಿಐ ಕಸ್ಟಡಿಗೆ ತೆಗೆದುಕೊಂಡಿದೆ.
ಪ್ರಕರಣದಲ್ಲಿ ದೇಶಮುಖ್ ಜಾಮೀನು ಅರ್ಜಿಯನ್ನು ಬಾಂಬೆ ಉಚ್ಚ ನ್ಯಾಯಾಲ ಎಪ್ರಿಲ್ 8ರಂದು ವಿಚಾರಣೆ ನಡೆಸಲಿದೆ.
ದೇಶಮುಖ್ ಸಲ್ಲಿಸಿದ ಜಾಮೀನು ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸಲು ನ್ಯಾಯಾಲಯ ಮಾರ್ಚ್ 25ರಂದು ಜಾರಿ ನಿರ್ದೇಶನಾಲಯಕ್ಕೆ ಒಂದು ವಾರಗಳ ಕಾಲಾವಕಾಶ ನೀಡಿತ್ತು. ಅನಿಲ್ ದೇಶಮುಖ್ ಅವರನ್ನು ಈ ಹಿಂದೆ ಅರ್ಥರ್ ರಸ್ತೆ ಕಾರಾಗೃಹದಲ್ಲಿ ಇರಿಸಲಾಗಿತ್ತು.
100 ಕೋಟಿ ರೂಪಾಯಿ ಸುಲಿಗೆ ಹಾಗೂ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಈ ವರ್ಷ ಫೆಬ್ರವರಿಯಲ್ಲಿ ಸಲ್ಲಿಸಿದ ಆರೋಪ ಪಟ್ಟಿಯಲ್ಲಿ ದೇಶಮುಖ್ ಅವರು 1992ರಿಂದ ತನ್ನ ಹುದ್ದೆಯನ್ನು ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿತ್ತು.
Next Story





