ಪೆಟ್ರೋಲ್, ಡೀಸೆಲ್ ಬೆಲೆ ಮತ್ತೆ ಏರಿಕೆ: 12 ದಿನಗಳಲ್ಲಿ ರೂ. 7.20 ಹೆಚ್ಚಳ

ಸಾಂದರ್ಭಿಕ ಚಿತ್ರ (PTI)
ಹೊಸದಿಲ್ಲಿ: ಪೆಟ್ರೋಲ್, ಡೀಸೆಲ್ ದರ ಮತ್ತೆ ಹೆಚ್ಚಳವಾಗಿದ್ದು, ಪ್ರತಿ ಲೀಟರ್ ಗೆ ತಲಾ 80 ಪೈಸೆಯಷ್ಟು ಏರಿಕೆಯಾಗಿದೆ. ಕಳೆದ 12 ದಿನಗಳಲ್ಲಿ ಪ್ರತಿ ಲೀಟರ್ಗೆ ಒಟ್ಟು ರೂ. 7.20ರಷ್ಟು ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ದರ ರೂ. 108.13 ಮತ್ತು 92.03 ಆಗಿದ್ದು, ದಿಲ್ಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ರೂ.102.61 ಮತ್ತು ರೂ. 93.87 ಆಗಿದೆ.
ಶುಕ್ರವಾರ ವಾಣಿಜ್ಯ ಸಿಲಿಂಡರ್ ದರವನ್ನು ರೂ. 250ರಷ್ಟು ಏರಿಕೆ ಮಾಡಲಾಗಿತ್ತು.
Next Story