ಮಂಗಳೂರು: ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತುಗಳ ಬೆಲೆಯೇರಿಕೆ ಖಂಡಿಸಿ ಪ್ರತಿಭಟನೆ

ಮಂಗಳೂರು : ಪೆಟ್ರೋಲ್, ಡೀಸೆಲ್, ಔಷಧ ಮತ್ತಿತರ ಜೀವನಾವಶ್ಯಕ ವಸ್ತುಗಳ ಬೆಲೆಯೇರಿಕೆಯನ್ನು ಖಂಡಿಸಿ ಸಿಪಿಎಂ ದ.ಕ. ಜಿಲ್ಲಾ ಸಮಿತಿಯು ಶನಿವಾರ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಸಿತು.
ಕೇಂದ್ರ ಮತ್ತು ರಾಜ್ಯ ಸರಕಾರಗಳು ಜನಸಾಮಾನ್ಯರ ಸಮಸ್ಯೆಗೆ ಧ್ವನಿಯಾಗುತ್ತಿಲ್ಲ. ಭಾವನಾತ್ಮಕ ವಿಚಾರಗಳನ್ನು ಕೆದಕಿಕೊಳ್ಳುವ ಸಂಘಟನೆಗಳಿಗೆ ಬೆಂಬಲ ವ್ಯಕ್ತಪಡಿಸುವ ಮೂಲಕ ಬೆಲೆ ಏರಿಕೆಯ ಸಂಗತಿಯನ್ನು ಮರೆಮಾಚಲು ಸರಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಿಪಿಎಂ ಮುಖಂಡರಾದ ಯಾದವ ಶೆಟ್ಟಿ, ಸುನೀಲ್ ಕುಮಾರ್ ಬಜಾಲ್, ಬಾಲಕೃಷ್ಣ ಶೆಟ್ಟಿ, ಸದಾಶಿವ ದಾಸ್, ಬಿ.ಕೆ. ಇಮ್ತಿಯಾಝ್, ಜಯಂತ್ ನಾಯಕ್, ಪದ್ಮಾವತಿ ಶೆಟ್ಟಿ, ಜಯಂತಿ ಶೆಟ್ಟಿ ಯೋಗೀಶ್ ಜಪ್ಪಿನಮೊಗರು, ಮನೋಜ್ ವಾಮಂಜೂರು ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
Next Story