Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್: ...

ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್: ಬೆಲೆ ಏರಿಕೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

''ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ''

ವಾರ್ತಾಭಾರತಿವಾರ್ತಾಭಾರತಿ3 April 2022 10:49 AM IST
share
ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್:  ಬೆಲೆ ಏರಿಕೆ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: 'ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ. ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ. ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್' ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. 

ಈ ಕುರಿತು ರವಿವಾರ ಸರಣಿ ಟ್ವೀಟ್ ಮಾಡಿರುವ ಎಚ್.ಡಿಕೆ,  ''13 ದಿನದಿಂದ ಬೆಲೆ ಏರಿಕೆ ನಿರಂತರ. ಎರಡೂ ತೈಲಗಳ ಬೆಲೆ 8 ರೂ. ಹೆಚ್ಚಳ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರಿಗೆ 108.99 ರೂ., (ಇಂದಿನ ಹೆಚ್ಚಳ:88 ಪೈಸೆ) ಡೀಸೆಲ್ ಬೆಲೆ ಲೀಟರಿಗೆ 92.83 ರೂ.(ಇಂದಿನ ಹೆಚ್ಚಳ:78 ಪೈಸೆ) ಜಿಗಿದಿದೆ. ಖಜಾನೆ ಭರ್ತಿಗೆ ಷೇರು ಸೂಚ್ಯಂಕವನ್ನು ಕುಣಿಸಿದಂತೆ, ಬೆಲೆ ಸೂಚ್ಯಂಕದ ಕರಡಿ ಕುಣಿತವೂ ಭರ್ಜರಿ'' ಎಂದು ವ್ಯಂಗ್ಯವಾಡಿದ್ದಾರೆ.

''2018ರಲ್ಲಿ ನಾನು ಸಿಎಂ ಆಗಿದ್ದಾಗ ಸಾಲ ಮನ್ನಾಕ್ಕಾಗಿ ಪೆಟ್ರೋಲ್ ಲೀಟರಿಗೆ 1.12 ಪೈಸೆ, & ಡೀಸೆಲ್ ಬೆಲೆಯಲ್ಲಿ ಲೀಟರಿಗೆ 1.14 ಪೈಸೆ ಹೆಚ್ಚಳ ಮಾಡಿದ್ದಕ್ಕೆ ಬಿಜೆಪಿ ನಾಯಕರು ಕೂಗಾಡಿ ಗಲಾಟೆ ಎಬ್ಬಿಸಿದ್ದರು. ಬೆಲೆ ಹೆಚ್ಚಳದ ಈ ಹಣ ರೈತರಿಗೆ ಹೋಗಿಬಿಡುತ್ತದಲ್ಲ ಎಂದು ಅವರ ಹೊಟ್ಟೆ ಉರಿದುಹೋಯಿತು'' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಾದಿಬೀದಿಯಲ್ಲಿ ಖಾಲಿ ಸಿಲಿಂಡರುಗಳನ್ನು ಹೊತ್ತ ಬಿಜೆಪಿಗರು ಈಗೇಕೆ ಮೌನಕ್ಕೆ ಶರಣಗಾಗಿದ್ದಾರೆ? ಬೆಲೆ ಏರಿಕೆಯಿಂದ ಬಡವರ ಹೊಟ್ಟೆ ಉರಿದರೆ ನಿಮಗೆ ಖುಷಿಯಾ? ಬನ್ನಿ, ಬೀದಿಗೆ ಬಂದು ಪ್ರತಿಭಟನೆ ಮಾಡಿ, ಕೇಂದ್ರ ಸರಕಾರದ ವಿರುದ್ಧ ಧಿಕ್ಕಾರ ಕೂಗಿ. ಸಿಮೆಂಟ್, ಕಬ್ಬಿಣ, ಆಹಾರ ಪದಾರ್ಥ ಸೇರಿ ಸಾಮಾನ್ಯ ವ್ಯಕ್ತಿ ಬಳಸುವ ಪ್ರತಿ ವಸ್ತುವಿನ ಬೆಲೆ ನಿತ್ಯವೂ ಜಿಗಿಯುತ್ತಿದೆ. ಶ್ರೀಸಾಮಾನ್ಯನು ಮನೆ ಕಟ್ಟುವ ಕನಸು ಇನ್ನು ಬರೀ ಕನಸೇ. ಅವನ ಜೇಬು ಖಾಲಿಯಾಗುತ್ತಿದೆ, ಕೆಲವರ ಜೇಬು ತುಂಬುತ್ತಿದೆ. ಬಿಜೆಪಿ ಭಾರತದಲ್ಲಿ ಉದ್ಯಮಿಗಳು ಜಗತ್ತಿನ ಟಾಪ್ ಶ್ರೀಮಂತರಾಗುತ್ತಿದ್ದಾರೆ ಎಂದು ಕಿಡಿಗಾರಿದ್ದಾರೆ. 

'ಹಿಜಾಬ್, ಕೇಸರಿ ಶಾಲು, ಟಿಪ್ಪು ಪಠ್ಯ, ಮುಸ್ಲಿಂ ವರ್ತಕರಿಗೆ ನಿಷೇಧ, ಹಲಾಲ್ ಕಟ್ ಬಗ್ಗೆ ಅಬ್ಬರಿಸಿ ಬೊಬ್ಬಿರಿಯುವ ʼಶ್ರೀಮಂತರ ಪಕ್ಷ ಬಿಜೆಪಿʼಯು ಬೆಲೆ ಏರಿಕೆ ಬಗ್ಗೆ ಮಾತ್ರ ಮೌನವಾಗಿದೆ. ರಾಜ್ಯ ಸರಕಾರವೂ ಮೌನ, ಮುಖ್ಯಮಂತ್ರಿಗಳೂ ಮೌನ, ಮೌನಂ ಶರಣಂ ಗಚ್ಛಾಮಿ.  ಡಾ.ಮನಮೋಹನ್ ಸಿಂಗ್ ಅವರನ್ನು ʼಮೌನಿ ಪ್ರಧಾನಿʼ ಎಂದ ಇವರ ಅಬ್ಬರ ಎಲ್ಲಿ ಉಡುಗಿ ಹೋಗಿದೆ? ದನಿಯೆತ್ತಿ ಬೆಲೆ ಏರಿಕೆ ವಿರುದ್ಧ. ಇದು ನನ್ನ ಆಗ್ರಹ' ಎಂದು ಹೇಳಿದ್ದಾರೆ.

'ಬೆಲೆ ಏರಿಕೆ ಬಗ್ಗೆ ಜನರ ಆಕ್ರೋಶ ಎಲ್ಲಿ ಆಸ್ಫೋಟಗೊಂಡು ಬಿಜೆಪಿ ಬುಡಕ್ಕೆಲ್ಲಿ ಬೆಂಕಿ ಬೀಳುತ್ತದೋ ಎಂಬ ಭಯದಿಂದ ಆ ಮುಗ್ಧಜನರ ಮನಸ್ಸನ್ನು ಸೂಕ್ಷ್ಮ ವಿಷಯಗಳ ಕಡೆ ಹೊರಳುವಂತೆ ಮಾಡಲಾಗಿದೆ. ʼ150 ಸೀಟಿನ ರೋಡ್ ಮ್ಯಾಪ್ ಎಲ್ಲಿ ಮಣ್ಣುಪಾಲಾಗುತ್ತದೋʼ ಎಂದು ಹಿಂದುತ್ವದ ವಿನಾಶಕ್ಕೆ ಹಿಂಸಾಚಾರದ ಶಂಖ ಊದಲಾಗಿದೆ. ಘನವೆತ್ತ ಮಾಜಿ ಸಿಎಮ್, ಮಾಜಿ ಕೇಂದ್ರಮಂತ್ರಿ ಡಿ.ವಿ.ಸದಾನಂದಗೌಡರು, ಬೆಲೆ ಏರಿಕೆಗೆ ಹಿಂದಿನ ಯುಪಿಎ ಸರಕಾರ ಕಾರಣ ಎಂದಿದ್ದಾರೆ. 8 ವರ್ಷವಾದರೂ ಯುಪಿಎ ಮಾಡಿದ ತಪ್ಪು ಸರಿ ಮಾಡಲಿಲ್ಲ, ಏಕೆ? ಅಡುಗೆ ಮನೆಗಳಲ್ಲಿ ತಾಯಂದಿರು, ʼಬೆಲೆ ಏರಿಕೆ ಬೆಂಕಿʼಯಲ್ಲಿ ಬೇಯುತ್ತಿದ್ದರೆ ನಿಮಗೆ ರಾಜಕೀಯ ಮುಖ್ಯವಾಗಿದೆ. ನಾಚಿಕೆಯಾಗಬೇಕು' ಎಂದಿದ್ದಾರೆ.

'ಬಿಜೆಪಿ ಎಂದರೆ ಭಾರತೀಯ ಜನತಾ ಪಕ್ಷವಲ್ಲ, ಬಡವರ ರಕ್ತಹೀರಿ ಸಿರಿವಂತರ ಖಜಾನೆ ಭರ್ತಿ ಮಾಡುವ ʼಬಲ್ಲಿದ ಜನರ ಪಕ್ಷʼ. ಬೆಲೆ ಶೂಲದಿಂದ ಬಡಜನರನ್ನು ಬರ್ಬಾದ್ ಮಾಡುತ್ತಿರುವ ಪಕ್ಷ' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.  

ಹಲಾಲ್ ಹಾಲಾಹಲದ ನಡುವೆಯೇ ಇಂದು ಬೆಳಗ್ಗೆ ಬರಸಿಡಿಲಿನಂತೆ ಅಪ್ಪಳಿಸಿದ ಸುದ್ದಿ.

ಪೆಟ್ರೋಲ್, ಡೀಸೆಲ್ ದರ ಮತ್ತೆ ಏರಿಕೆ; 13 ದಿನಗಳಲ್ಲಿ 8 ರೂ. ಜಿಗಿತ!

ಇದಪ್ಪಾ ʼಬಹುಜನ ಹಿತಾಯ, ಬಹುಜನ ಸುಖಾಯʼ ಎಂದು ಭಾಷಣ ಬಿಗಿಯುವ ಬಿಜೆಪಿ ಆಡಳಿತದಲ್ಲಿ ಇಂಡಿಯಾ ಶೈನಿಂಗ್!! 1/10

— H D Kumaraswamy (@hd_kumaraswamy) April 3, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X