ವಿಧಾನಪರಿಷತ್ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧೆ: ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಮುಂದಿನ ಜೂನ್ ತಿಂಗಳಲ್ಲಿ ವಿಧಾನ ಪರಿಷತ್‌ನ ನಾಲ್ಕು ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸುವುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಘೋಷಿಸಿದ್ದಾರೆ.
ಈ ಕುರಿತು ರವಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಿಜೆಪಿಯಿಂದ ಸ್ಪರ್ಧಿಸುವುದಕ್ಕೆ ಕುಮಾರಸ್ವಾಮಿ ಅವರು ಮುಕ್ತವಾಗಿ ಒಪ್ಪಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ನಾಯಕರು ಹಾಗೂ ಬಿ.ಎಸ್. ಯಡಿಯೂರಪ್ಪ ಅವರು ನನ್ನೊಂದಿಗೆ ಮಾತನಾಡಿದ್ದಾರೆ. ಚುನಾವಣಾ ದಿನಾಂಕ ಘೋಷಣೆಯಾದ ಬಳಿಕ ಬಿಜೆಪಿ ಸೇರ್ಪಡೆ ದಿನಾಂಕ ನಿಗದಿಪಡಿಸಲಾಗುವುದು ಎಂದು ತಿಳಿಸಿದರು.
ಸದ್ಯ ಜೆಡಿಎಸ್ ಪಕ್ಷದಲ್ಲಿರುವ ಬಸವರಾಜ ಹೊರಟ್ಟಿ, ಬಿಜೆಪಿ ಸೇರ್ಪಡೆ ಕುರಿತು ಈ ಹಿಂದೆಯೇ ಮಾತುಕತೆಗಳು ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ವಿಧಾನಪರಿಷತ್ತಿನ ನಾಲ್ಕು ಕ್ಷೇತ್ರಗಳ ಪೈಕಿ ಪದವೀಧರ, ಶಿಕ್ಷಕರ ಕ್ಷೇತ್ರಗಳಿಗೆ ಮೂವರು ಅಭ್ಯರ್ಥಿಗಳ ಹೆಸರನ್ನಷ್ಟೇ ಘೋಷಿಸಿದ್ದ ಬಿಜೆಪಿ ಶಿಕ್ಷಕರ ಕ್ಷೇತ್ರ ಒಂದಕ್ಕೆ ಇನ್ನೂ ಹೆಸರು ಪ್ರಕಟಿಸದಿರಲು ಇದೇ ಕಾರಣ ಎಂಬ ಮಾಹಿತಿ ಇದೆ.
ಇದನ್ನೂ ಓದಿ: ಪರಿಷತ್ ಚುನಾವಣೆ: ಮೂವರು ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ







