ಕಡಬ: ನದಿಯಲ್ಲಿ ಮುಳುಗಿ ವಿದ್ಯಾರ್ಥಿ ಮೃತ್ಯು

ಕಡಬ: ನದಿಯಲ್ಲಿ ಮುಳುಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಡಬ ಸಮೀಪದ ಪಿಜಕ್ಕಳ ಎಂಬಲ್ಲಿ ರವಿವಾರ ಮಧ್ಯಾಹ್ನ ಸಂಭವಿಸಿದೆ.
ಮೃತ ಬಾಲಕನನ್ನು ನರಿಮೊಗರು ಐಟಿಐ ವಿದ್ಯಾರ್ಥಿ ಕಡಬ ಹೈಸ್ಕೂಲ್ ಬಳಿಯ ನಿವಾಸಿ ನಾವೂರ ಎಂಬವರ ಪುತ್ರ ನಿತೇಶ್ ಎಂದು ಗುರುತಿಸಲಾಗಿದೆ.
ಈತ ತನ್ನ ಸ್ನೇಹಿತರೊಂದಿಗೆ ಪಾಲೋಳಿ ನದಿಯಲ್ಲಿ ನೀರಿಗಿಳಿದಿದ್ದ ವೇಳೆ ಮುಳುಗಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಈ ಬಗ್ಗೆ ಕಡಬ ಠಾಣೆಗೆ ಮಾಹಿತಿ ನೀಡಲಾಗಿದೆ.
Next Story