ಮಂಗಳೂರು: ಘನತ್ಯಾಜ್ಯ ವಿಲೇವಾರಿ ವಾಹನಗಳ ಕೀ ಹಸ್ತಾಂತರ

ಮಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ರವಿವಾರ ನಗರದ ಕೆ.ಪಿ.ಟಿ ಮೈದಾನದಲ್ಲಿ ಸ್ವಚ್ಛ ಭಾರತ್ ಮಿಷನ್ ವತಿಯಿಂದ 54 ಘನತ್ಯಾಜ್ಯ ಕಸ ವಿಲೇವಾರಿ ವಾಹನಗಳ ಕೀ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯ್ಕ್, ಸಂಜೀವ್ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಉಪ ಕಾರ್ಯದರ್ಶಿ ಆನಂದ್ ಕುಮಾರ್, ಮಂಗಳೂರು ತಾ.ಪಂ. ಇಒ ನಾಗರಾಜ್, ಬಂಟ್ವಾಳ ಇಒ ರಾಜಣ್ಣ, ಬೆಳ್ತಂಗಡಿ ಇ.ಒ. ಕುಸುಮಾಧರ್, ಸುಳ್ಯ ಇಒ ಭವಾನಿ ಶಂಕರ್ ಹಾಗೂ ಇತರೆ ಅಧಿಕಾರಿಗಳು ಇದ್ದರು.

Next Story