ಕಾರು ಢಿಕ್ಕಿ: ಪಾದಚಾರಿ ಮೃತ್ಯು
ಉಡುಪಿ : ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಮುಡಾರು ಗ್ರಾಮದ ಕರಿಮಾರುಕಟ್ಟೆ ಎಂಬಲ್ಲಿ ಕಾರ್ಕಳ-ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಎ.2ರಂದು ಸಂಜೆ ವೇಳೆ ನಡೆದಿದೆ.
ಮೃತರನ್ನು ನಾರಾಯಣ ಶೆಟ್ಟಿ(55) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಬಜಗೊಳಿ ಕಡೆಗೆ ಹೋಗುತ್ತಿದ್ದ ಕಾರು, ರಸ್ತೆಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ನಾರಾಯಣ ಶೆಟ್ಟಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story