Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜೆಜೆಎಂ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವ...

ಜೆಜೆಎಂ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವ ಈಶ್ವರಪ್ಪ ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 April 2022 8:19 PM IST
share
ಜೆಜೆಎಂ ಪರಿಣಾಮಕಾರಿ ಅನುಷ್ಠಾನಕ್ಕೆ ಸಚಿವ ಈಶ್ವರಪ್ಪ ಸೂಚನೆ

ಮಂಗಳೂರು : ಜಲ ಜೀವನ್ ಮಿಷನ್ ಯೋಜನೆಯಡಿ ಪೂರ್ಣಗೊಂಡ ಕಾಮಗಾರಿಗಳಲ್ಲಿ ಯಾವುದೇ ಸಮಸ್ಯೆಗಳು ಕಂಡು ಬಂದಲ್ಲಿ  ತಪ್ಪಿತಸ್ಥ ಅಧಿಕಾರಿಗಳನ್ನು ಸೂಕ್ತ ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಎಚ್ಚರಿಕೆ ನೀಡಿದರು.

ಅವರು ನಗರದ ಜಿಲ್ಲಾ ಪಂಚಾಯತ್‌ನ ನೇತ್ರಾವತಿ ಸಭಾಂಗಣದಲ್ಲಿಂದು  ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೂರ್ಣಗೊಂಡ ಕಾಮಗಾರಿಗಳನ್ನು ಪರಿಶೀಲಿಸಲು ಬೆಂಗಳೂರಿನಿಂದ ತಜ್ಞರ ತಂಡವನ್ನು ಕಳುಹಿಸುವ ಕುರಿತಂತೆ ಮಾತನಾಡಿದ ಸಚಿವರು, ಆ ತಂಡವು ಪೂರ್ಣಗೊಂಡ ಕಾಮಗಾರಿಗಳ ಬಗ್ಗೆ ಸಮಪರ್ಕ ಮಾಹಿತಿ ನೀಡದಿದ್ದಲ್ಲೀ ಸಂಬಂಧಿಸಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು ಅವರಿಗೆ ಸಚಿವರು ತಾಕೀತು ಮಾಡಿದರು.

ಜಲಜೀವನ್ ಮಿಷನ್ ಯೋಜನೆಯ ಒಂದನೇ ಬ್ಯಾಚ್‌ನಡಿ ಬಂಟ್ವಾಳ ತಾಲೂಕಿನಲ್ಲಿ ಕೈಗೊಳ್ಳಲಾದ 149 ಕಾಮಗಾರಿಗಳ ಪೈಕಿ 95 ಪೂರ್ಣಗೊಂಡಿದ್ದು, 54 ಪ್ರಗತಿಯಲ್ಲಿವೆ, ಪೂರ್ಣಗೊಂಡಿರುವ ಕಾಮಗಾರಿಗಳಲ್ಲಿ ಗ್ರಾಮಸ್ಥರಿಗೆ ನೀರು ಲಭ್ಯವಾದರಷ್ಟೇ ಕಾಮಗಾರಿ ಮುಕ್ತಾಯವಾಗಿದೆ ಎಂಬುದಾಗಿರುತ್ತದೆ, ಆದ ಕಾರಣ ಆಯಾ ಗ್ರಾಮಗಳಲ್ಲಿ ಗ್ರಾಮಸ್ಥರಿಗೆ ನೀರು ಪೂರೈಕೆ ಯಾದ ಸಂಪೂರ್ಣ ಮಾಹಿತಿ ನೀಡಬೇಕು, ಆದ್ದರಿಂದ ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯತ್‌ಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂಟ್ರಾಕ್ಟರ್‌ಗಳೊಂದಿಗೆ ಆಯಾ ಗ್ರಾಮಗಳಿಗೆ ತೆರಳಿ ಜೆಜೆಎಂ ಕಾಮಗಾರಿಗಳನ್ನು ಪರಿಶೀಲಿಸಬೇಕು, ಮುಖ್ಯವಾಗಿ ಗ್ರಾಮದ ಮಹಿಳೆಯರೊಂದಿಗೆ ಮಾತನಾಡಿ ಯೋಜನೆಯ ಫಲಶೃತಿಗಳನ್ನು ತಿಳಿದುಕೊಳ್ಳಬೇಕು, ಇಲ್ಲದಿದ್ದಲ್ಲೀ ಸಂಬಂಧಿಸಿದ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳೇ ನೇರ ಹೊಣೆ ಆಗಿರುತ್ತಾರೆ ಎಂದು ಅವರು ಎಚ್ಚರಿಕೆ ನೀಡಿದರು.

ಜೆಜೆಎಂ ಕಾಮಗಾರಿಗೆ ವೇಗ ನೀಡಬೇಕಾದ ಅಗತ್ಯವಿದೆ ಎಂದ ಸಚಿವರು, ಆರ್ಥಿಕ ಪ್ರಗತಿಯನ್ನು ಸಹ ಕೂಡಲೇ ಸಾಧಿಸಬೇಕು, ಮನೆ ಮನೆಗೆ ಗಂಗೆ ಎಂಬ ಹೆಸರಿನಡಿ ಆರಂಭಿಸಲಾದ ಜೆಜೆಎಂ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಯಾವುದೇ ರೀತಿಯ ನೆರವು ಬೇಕಿದ್ದಲ್ಲೀ ಅದನ್ನು ರಾಜ್ಯ ಸರ್ಕಾರದಿಂದ ಕೂಡಲೇ ಒದಗಿಸಲಾಗುವುದು, ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಕೂಡಲೇ ಪೂರ್ಣಗೊಳಿಸಿ ಪ್ರತಿಯೊಂದು ಗ್ರಾಮದಲ್ಲಿ ಕುಡಿಯುವ ನೀರು ಒದಗಿಸಬೇಕು ಎಂದು ಅವರು ಸೂಚನೆ ನೀಡಿದರು.

ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಎಂಜಿನಿಯರ್ ನರೇಂದ್ರ ಬಾಬು ಮಾತನಾಡಿ, ಜಿಲ್ಲೆಯಲ್ಲಿ ಕೈಗೊಳ್ಳಲಾದ ಜೆಜೆಎಂನ ಮೊದಲ ಬ್ಯಾಚ್‌ನಲ್ಲಿ 468 ಕಾಮಗಾರಿಗಳ ಬಗ್ಗೆ 239 ಪೂರ್ಣಗೊಂಡಿದ್ದು, 229 ಪ್ರಗತಿಯಲ್ಲಿವೆ ಹಾಗೂ ಎರಡನೇ ಬ್ಯಾಚಿನಲ್ಲಿ ಬೆಳ್ತಂಗಡಿ, ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಲ್ಲಿ 124 ಕಾಮಗಾರಿಗಳಲ್ಲಿ 10 ಪ್ರಗತಿಯಲ್ಲಿವೆ, 49 ಕಾಮಗಾರಿಗಳು ವಿವಿಧ ಹಂತದಲ್ಲಿವೆ ಎಂದರು.

ಜೆಜೆಎಂನ ಮೊದಲ ಹಾಗೂ ಎರಡನೇ ಬ್ಯಾಚ್‌ನಲ್ಲಿ ಕೈಗೊಂಡ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಕಂಟ್ರಾಕ್ಟರ್‌ಗಳಿಗೆ ಹಣ ಪಾವತಿಸುವಂತೆ ಸಚಿವರು ಸೂಚನೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್ ಮಾತನಾಡಿ, ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕಳೆದ ವರ್ಷ ಶೇ.100 ಕ್ಕೂ ಹೆಚ್ಚಿನ ಪ್ರಗತಿ ಸಾಧಿಸಲಾಗಿದೆ, 16 ಲಕ್ಷ ಮಾನವ ಉದ್ಯೋಗ ದಿನಗಳನ್ನು ಸೃಷ್ಟಿಸಲಾಗಿದೆ, ಆದ್ದರಿಂದ ಪ್ರಸಕ್ತ ಸಾಲಿನಲ್ಲಿ 2 ಲಕ್ಷ ಹೆಚ್ಚುವರಿ ಸೇರಿದಂತೆ ಒಟ್ಟು 18 ಲಕ್ಷ ಮಾನವ ಉದ್ಯೋಗ ದಿನಗಳ ಸೃಷ್ಟಿಗೆ ಗುರಿ ನಿಗದಿಗೆ ಕೋರಲಾಗಿತ್ತು, ಅದರಂತೆ ಜಿಲ್ಲೆಗೆ 18 ಲಕ್ಷ ಮಾನವ ಉದ್ಯೋಗ ದಿನಗಳ ಗುರಿ ನೀಡಲಾಗಿದೆ ಹಾಗೂ ಜಿಲ್ಲೆಯಲ್ಲಿ ಈ ಬಾರಿ 11,357 ಹೊಸ ಜಾಬ್ ಕಾರ್ಡ್ ಗಳನ್ನು ವಿತರಿಸಲಾಗಿದೆ ಎಂದರು.

ಈ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಗ್ರಾಮೀಣ ಭಾಗದಲ್ಲಿ ಉತ್ತಮ ಆಸ್ತಿಗಳನ್ನು ಸೃಜಿಸುವಂತೆ ತಿಳಿಸಿದರು.

ವೇದಿಕೆಯಲ್ಲಿ ಶಾಸಕರಾದ ಸಂಜೀವ ಮಠಂದೂರು, ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಮಂಜುನಾಥ್ ಭಂಡಾರಿ ,ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ ಕುಮಾರ್ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X